ಆಗಸ್ಟ್ 11 ಕ್ಕೆ ದಾವಣಗೆರೆ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯ ಸ್ಥಾನಕ್ಕೆ ಚುನಾವಣೆ

ದಾವಣಗೆರೆ; ಆಗಸ್ಟ್ 11 ರಂದು ಮಧ್ಯಾಹ್ನ  3 ಗಂಟೆಗೆ ಮಹಾನಗರ ಪಾಲಿಕೆ ಕೌನ್ಸಿಲ್ ಸಭಾಂಗಣದಲ್ಲಿ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳನ್ನು ಆಯ್ಕೆ ಮಾಡಲು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಇವರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ. ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜನ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!