ಬಿಜೆಪಿ ಪರ ಆನ್ಲೈನ್ ಪ್ರಚಾರ.! ಕೇಂದ್ರದಲ್ಲಿದ್ದ 59 ಲ್ಯಾಪ್ಟಾಪ್ ವಶ

ದಾವಣಗೆರೆ: ಅನುಮತಿ ಇಲ್ಲದೆ ಆನ್ ಲೈನ್ ಮೂಲಕ ಬಿಜೆಪಿ ಪರ ಪ್ರಚಾರ ನಡೆಸಲಾಗುತ್ತಿದೆ ಎಂಬ ದೂರಿನ ಮೇರೆಗೆ ಚೇತನ್ ಹೋಟೆಲ್ ಮುಂಭಾಗದ ಜೆಪಿ ಫಂಕ್ಷನ್ ಹಾಲ್ ಮೇಲೆ ದಾಳಿ ನಡೆಸಿರುವ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು 59 ಲ್ಯಾಪ್ಟಾಪ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಆನ್ ಲೈನ್ ಪ್ರಚಾರ ಸ್ಥಳಕ್ಕೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ದಾಳಿ ನಡೆಸಿದರು. ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಬೇಕು. ಯಾವುದೇ ಅನುಮತಿ ಪಡೆಯದೇ ಮತದಾರರನ್ನು ಆನ್ ಲೈನ್ ಮೂಲಕ ಸೆಳೆಯುವ ಮೂಲಕ ಬಿಜೆಪಿ ವಾಮಮಾರ್ಗ ಅನುಸರಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು.
ಸ್ಥಳದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಜಮಾಯಿಸಿದರು. ಬಿಜೆಪಿಯ ಮುಖಂಡರು, ಕಾರ್ಯಕರ್ತರು ಬಂದಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಅಧಿಕಾರಿಗಳು ಲ್ಯಾಪ್ ಟಾಪ್ ಸೀಜ್ ಮಾಡಿ ತೆಗೆದುಕೊಂಡು ಹೋದರು. ಕಚೇರಿಯ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.