ಅಕ್ರಮ ಅಕ್ಕಿ ಬಹಿರಂಗ ಹರಾಜು
ದಾವಣಗೆರೆ: ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ನವಂಬರ್ 22 ರಂದು ಆಹಾರ ಶಿರಸ್ತೆದಾರ್ ಮತ್ತು ಪೊಲೀಸ್ ಇಲಾಖೆಯ ಜಂಟಿ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಅನಧಿಕೃತವಾಗಿ ಸಾಗಿಸುತ್ತಿದ್ದ 54 ಪ್ಲಾಸ್ಟಿಕ್ ಚೀಲಗಳಲ್ಲಿನ 40.11 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡ ದಾಸ್ತಾನನ್ನು ಮಾರ್ಚ್ 09ರಂದು ಬೆಳಿಗ್ಗೆ 11 ಗಂಟೆಗೆ ಜಗಳೂರು ಎಪಿಎಂಸಿ ಆವರಣದಲ್ಲಿರುವ ಕೆ.ಎಫ್.ಸಿ.ಎಸ್.ಸಿ ಸಗಟು ಮಳಿಗೆ ಜಗಳೂರು ಇಲ್ಲಿ ಬಹಿರಂಗ ಹರಾಜು ಮಾಡಲಾಗುವುದು.
ಹರಾಜಿನಲ್ಲಿ ಭಾಗವಹಿಸುವ ಪ್ರತಿಯೊಬ್ಬ ಬಿಡ್‍ದಾರರು ರೂ.10 ಸಾವಿರ ಗಳನ್ನು ಮುಂಗಡ ಭದ್ರತಾ ಠೇವಣಿಯನ್ನಾಗಿ ಪಾವತಿಸಬೇಕಾಗಿರುತ್ತದೆ. ಹರಾಜು ಮುಗಿದ ನಂತರ ಗರಿಷ್ಠ ಹಾಗೂ ಎರಡನೇ ಗರಿಷ್ಠ ಬಿಡ್‍ದಾರರನ್ನು ಹೊರತುಪಡಿಸಿ ಉಳಿದ ಬಿಡ್‍ದಾರರಿಗೆ ಸ್ಥಳದಲ್ಲಿಯೇ ಹಣವನ್ನು ಹಿಂತಿರುಗಿಸಲಾಗುವುದು. ಗರಿಷ್ಠ ಬಿಡ್ ಕರೆದ ವ್ಯಕ್ತಿಯು ಹರಾಜು ಆದ ದಿನವೇ ಪೂರ್ತಿ ಹಣವನ್ನು ಸ್ಥಳದಲ್ಲಿಯೇ ಪಾವತಿ ಮಾಡತಕ್ಕದ್ದು ಮತ್ತು ಅದೇ ದಿನ ದಾಸ್ತಾನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಹೋಗತಕ್ಕದ್ದು. ಸವಾಲುದಾರರು ಇಲಾಖೆಯ ಕಾನೂನಿಗೆ ಒಳಪಟ್ಟಿರಬೇಕು. ಸವಾಲುದಾರರು ಹರಾಜಿನಲ್ಲಿ ಗೊತ್ತುಪಡಿಸಿದ ದಿನಾಂಕದಂದು ಅರ್ಧ ಗಂಟೆ ಮುಂಚಿತವಾಗಿ ಭಾಗವಹಿಸತಕ್ಕದ್ದು. ಅಂತಿಮ ಹರಾಜನ್ನು ಒಪ್ಪಿಕೊಳ್ಳುವುದು ಅಥವಾ ತಿರಸ್ಕರಿಸುವುದು ಹಾಗೂ ಹರಾಜಿನಲ್ಲಿ ನಿಗದಿಪಡಿಸಿದ ಸರ್ಕಾರಿ ಸವಾಲಿನ ಮೊತ್ತಕ್ಕಿಂತ ಕಡಿಮೆ ಮೊತ್ತ ಕೂಗಿದಲ್ಲಿ ಅಥವಾ ಹರಾಜು ಸಮಯದಲ್ಲಿ ಬಿಡ್‍ದಾರರ ಸಂಖ್ಯೆ ಕಡಿಮೆಯಿದ್ದಲ್ಲಿ ಹರಾಜನ್ನು ಮುಂದೂಡುವ ಅಧಿಕಾರ ಹರಿಹರ ತಹಶೀಲ್ದಾರ್ ಅವರ ಅಧಿಕಾರಕ್ಕೆ ಒಳಪಟ್ಟಿರುತ್ತದೆ ಎಂದು ಜಗಳೂರು ತಹಸಿಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ