Ops Sindoor: ಆಪರೇಷನ್ ಸಿಂಧೂರ, ಭಾರತಕ್ಕೆ ಶುಭ ಕೋರಿ ಹಿರಿಯ ಶಾಸಕ ಹಾಗೂ ಸಂಸದರಿಂದ ದುಗ್ಗಮ್ಮನಿಗೆ ವಿಶೇಷ ಪೂಜೆ

ದಾವಣಗೆರೆ: (Ops Sindoor) ರಾಜ್ಯ ಸರ್ಕಾರ ಭಾರತೀಯ ಸೇನೆಗೆ ಸ್ಥೈರ್ಯ ತುಂಬಲು ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಆದೇಶ ಹೊರಡಿಸಿದ ರಾಜ್ಯದ ಹಿರಿಯ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅವರು ದಾವಣಗೆರೆಯನ್ನು ಕಾಯುವ ನಗರದೇವತೆ ಶ್ರೀ ದುರ್ಗಾಂಭಿಕಾ ದೇವಿಗೆ ದೇಶವನ್ನು ಕಾಯು ತಾಯಿ ಎಂದು ವಿಶೇಷ ಪೂಜೆಯನ್ನು ಸಲ್ಲಿಸಿದರು.
ನಗರದೇವತೆ ಶ್ರೀ ದುರ್ಗಾಂಭಿಕಾ ದೇವಿಯ ದೇವಸ್ಥಾನಕ್ಕೆ ಭೇಟಿ ನೀಡಿದ ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ದೇವಿಯ ದರ್ಶನ ಪಡೆದು ನಾಡಿನ ಸುಖ-ಶಾಂತಿ ಹಾಗೂ ಜನರ ಒಳಿತಿಗಾಗಿ ಪ್ರಾರ್ಥಿಸಿದರು.ಬಳಿಕ
ಶಕ್ತಿ ಸ್ವರೂಪಿಣಿಯಾದ ದುರ್ಗಾದೇವಿಯು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ತೊಡಗಿರುವ ನಮ್ಮ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ದೇವಿ ಅನುಗ್ರಹಿಸಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸುವ ಮೂಲಕ ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದೆ. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಯಶಸ್ವಿ ಕಾರ್ಯಾಚರಣೆ ನಡೆಸಿದ ಭಾರತೀಯ ಸೇನೆಗೆ ದೇಶದಾದ್ಯಂತ ಅಭಿನಂದಿಸಲಾಗುತ್ತಿದೆ.
ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಆಪರೇಷನ್ ಸಿಂಧೂರ್ ಭಾಗವಾಗಿ ಎಲ್ಲಾ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲು ಸೂಚನೆ ನೀಡಿದ್ದಾರೆ. ಹೀಗಾಗಿ ಭಾರತೀಯ ಸೇನೆಯ ಹೆಸರಿನಲ್ಲಿ ದುರ್ಗಾಂಭಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಮಾಡಿದರು.
ಯುದ್ದದಲ್ಲಿ ಪಾಕಿಸ್ಥಾನದ ಭಯೋತ್ಪಾದಕರನ್ನು ಮಟ್ಟ ಹಾಕಲು ಭಾರತ ಸೇನೆಗೆ ಶಕ್ತಿ, ಹಾಗೂ ಬಲವನ್ನು ಮತ್ತು ಪಾಪಿ ಪಾಕಿಸ್ಥಾನವನ್ನು ಬಗ್ಗು ಬಡಿಯಲು ಭಾರತ ಸೇನೆಗೆ ಶಕ್ತಿಯನ್ನು ಕರುಣಿಸು ತಾಯಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತರು ಸಹ ಶಾಸಕರೊಂದಿಗೆ ಪೂಜೆಯಲ್ಲಿ ಪಾಲ್ಗೊಂಡರು.