ದಾವಣಗೆರೆ ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ವಿದ್ಯಾರ್ಥಿನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಆದೇಶ! ನಿಮ್ಮ ಜಿಲ್ಲೆ ಇದೆಯೇ ನೋಡಿ,!
ದಾವಣಗೆರೆ: ಅಲೆಮಾರಿ, ಅರೆಅಲೆಮಾರಿ ಸಮುದಾಯವರು ಹೆಚ್ಚು ವಾಸಿಸುತ್ತಿರುವ ರಾಜ್ಯದ 9 ಜಿಲ್ಲೆಗಳಲ್ಲಿನ ವಿದ್ಯಾರ್ಥಿನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮೇ.31ರಂದು ಆಡಳಿತ ಅನುಮೋದನೆ ನೀಡಿ ಆದೇಶ ಹೊರಡಿಸಿದೆ.
ರಾಜ್ಯದ ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ತುಮಕೂರು, ಕಲಬುರಗಿ, ಹಾವೇರಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ವಿದ್ಯಾರ್ಥಿನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಆಡಳಿತ ಅನುಮೋದನೆ ನೀಡಿದೆ. ಅಲೆಮಾರಿ, ಅರೆಅಲೆಮಾರಿ ಸಮುದಾಯದವರು ಅತಿ ಹೆಚ್ಚು ವಾಸಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಈ 9 ಜಿಲ್ಲೆಗಳ ಸ್ವಂತ ಕಟ್ಟಡ ಕಾಮಗಾರಿಯನ್ನು ತಲಾ ರೂ.335.16 ಲಕ್ಷಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಲು ಹಾಗೂ ಕರ್ನಾಟಕ ಗೃಹ ಮಂಡಳಿ ಮುಖಾಂತರ ಕೈಗೊಳ್ಳಲು ಕೆಲವು ಷರತ್ತುಗಳಿಗೊಳಪಟ್ಟು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿದೆ.
garudavoice21@gmail.com 9740365719