ನಮ್ಮ ನಾಯಕ ವಿಶ್ವನಾಯಕ, ಕಾಂಗ್ರೆಸ್ ನಾಯಕ ಜೈಲಿಗೆ ಹೋಗುವ ನಾಯಕ: ಈಶ್ವರಪ್ಪ

ದಾವಣಗೆರೆ: ನಮ್ಮ ನಾಯಕನನ್ನು ಇಡೀ ವಿಶ್ವವೇ ಮೆಚ್ಚುತ್ತದೆ. ವಿಶ್ವನಾಯಕ ನರೇಂದ್ರ ಮೋದಿ ನಮ್ಮ ನಾಯಕ. ಆದರೆ, ಜೈಲಿಗೆ ಹೋಗಲಿಕ್ಕೆ ತಯಾರಾಗಿರುವ ರಾಹುಲ್ ಗಾಂಧಿ ಕಾಂಗ್ರೆಸ್‌ನವರಿಗೆ ನಾಯಕರಾಗಿದ್ದಾರೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು.
ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡಿರುವ ಜನಸ್ತೋಮವನ್ನು ನೋಡಿ ಕಾಂಗ್ರೆಸ್‌ನವರ ಎದೆ ಢವ–ಢವ ಎಂದು ಹೊಡೆದುಕೊಳ್ಳುತ್ತಿದೆ ಎಂದರು.
ಕಾಂಗ್ರೆಸ್‌ನವರು ಅಧಿಕಾರಕ್ಕೆ ಬಂದರೆ ಪಿಎಫ್‌ಐ ಸಂಘಟನೆ ಮೇಲಿನ ನಿಷೇಧ ತೆರವುಗೊಳಿಸುವುದಾಗಿ ಹೇಳುತ್ತಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವುದಾಗಿ ಪ್ರತಿಪಾದಿಸುತ್ತಿದ್ದಾರೆ. ಕಾಂಗ್ರೆಸ್‌ನವರಿಗೆ ಧೈರ್ಯವಿದ್ದರೆ ಚುನಾವಣಾ ಪ್ರಣಾಳಿಕೆಯಲ್ಲಿ ಈ ವಿಷಯಗಳನ್ನು ಸೇರಿಸಲಿ ಎಂದು ಸವಾಲು ಹಾಕಿದರು.
ರಾಷ್ಟ್ರದ್ರೋಹಿ ಪಿಎಫ್‌ಐ ಸಂಘಟನೆಯನ್ನು ನಮ್ಮ ಸರ್ಕಾರ ನಿಷೇಧಿಸಿತು. ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತು. ಮತಾಂತರ ನಿಷೇಧವನ್ನು ಜಾರಿಗೊಳಿಸಿದ್ದು ಬಿಜೆಪಿ ಎಂದರು.