ಪಡಿತರ ಚೀಟಿದಾರರಿಗೆ ಇ-ಕೆವೈಸಿ ನೊಂದಾಯಿಸಲು ಸೆ.01ರಿಂದ 10 ರವೆರೆಗೆ ಅವಕಾಶ

IMG-20210825-WA0003

ದಾವಣಗೆರೆ: ತಾಲ್ಲೂಕಿನ ಗ್ರಾಮಾಂತರ ಪ್ರದೇಶದ ಚಾಲ್ತಿಯಲ್ಲಿರುವ ಅಂತ್ಯೋದಯ ಮತ್ತು ಬಿ.ಪಿ.ಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಸೇರ್ಪಡೆಗೊಂಡಿರುವ ಪ್ರತಿಯೊಬ್ಬ ಸದಸ್ಯರುಗಳ ಗುರುತಿನ ಮರು ನೊಂದಾವಣಿ ಕಾರ್ಯವನ್ನು (ಇ-ಕೆವೈಸಿ) ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಈ ಹಿಂದೆ ಪ್ರಾರಂಭಿಸಲಾಗಿತ್ತು. ಅನೇಕ ಜನರು ಈಗಾಗಲೇ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಕಾರ್ಯ ಮಾಡಿಸಿಕೊಂಡಿರುತ್ತಾರೆ. ಕಾರಣಾಂತರಗಳಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಆನಂತರ ಕೋವಿಡ್-2019 ಕಾರಣದಿಂದ ಈ ಕಾರ್ಯ ಮುಂದೂಡಲಾಗಿತ್ತು.

ಇದೀಗ ಇ-ಕೆವೈಸಿ ಸಂಗ್ರಹಣೆ ಕಾರ್ಯಕ್ರಮವನ್ನು ಪುನರಾರಂಭಿಸಲು ಆದೇಶ ನೀಡಲಾಗಿದ್ದು, ತಾಲ್ಲೂಕಿನಾದ್ಯಂತ ಪಡಿತರ ಚೀಟಿದಾರರು ಬೆರಳಚ್ಚು ನೀಡಿ ತಮ್ಮ ಗುರುತು ಮರು ನೊಂದಣೆ ಮಾಡಿಸದೇ ಇರುವ ಎಲ್ಲಾ ಸದಸ್ಯರುಗಳ ಇ-ಕೆವೈಸಿ ಸಂಗ್ರಹಣೆ ಕಾರ್ಯವನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಾರಂಭಿಸಲು ತಾಲ್ಲೂಕಿನ ಗ್ರಾಮಾಂತರ ಪ್ರದೇಶದ ಎಲ್ಲಾ ನ್ಯಾಯಬೆಲೆ ಅಂಗಡಿ ಮಾಲೀಕರುಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಸಂಗ್ರಹಣೆಯನ್ನು ಸೆ.01 ರಿಂದ ಸೆ.10 ರವರೆಗೆ ಸಂಗ್ರಹಿಸಲು ಬಾಕಿ ಉಳಿದಿರುವ ಸದಸ್ಯರುಗಳಿಗೆ ಅಂತಿಮ ಅವಕಾಶವನ್ನು ನೀಡಲಾಗಿದೆ. ಈ ಅವಧಿಯಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಕಾರ್ಯ ಇರುವುದಿಲ್ಲ.

ನ್ಯಾಯಬೆಲೆ ಅಂಗಡಿಗಳಲ್ಲಿ ತಮ್ಮ ಹೆಬ್ಬೆರಳು ನೀಡಿ ಇ-ಕೆವೈಸಿ ನೊಂದಾಯಿಸಲು ಜನರು ನ್ಯಾಯಬೆಲೆ ಅಂಗಡಿಗಳಲ್ಲಿ ಯಾವುದೇ ಹಣ ನೀಡುವಂತಿಲ್ಲ. ಆದರೆ ಮಾಸ್ಕ್ ಧರಿಸಿಕೊಂಡು ಕೋವಿಡ್ ನಿಯಮಾವಳಿಗಳನ್ನು ಪಾಲಿಸುವುದು ಕಡ್ಡಾಯವಾಗಿರುತ್ತದೆ.

ಸರ್ಕಾರದ ಆದೇಶದಂತೆ ಇ-ಕೆವೈಸಿ ಕಾರ್ಯವು ಸೆ. 10 ಕ್ಕೆ ಮುಕ್ತಾಯವಾಗಲಿದ್ದು, ಈ ಅವಧಿಯಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳದ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಸಹ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ತಮ್ಮ ಹೆಬ್ಬರಳು ನೀಡಿ, ಹೆಸರು ಮರು ನೊಂದಾವಣೆ (ಇ-ಕೆವೈಸಿ) ಮಾಡಿಸಿಕೊಳ್ಳಬೇಕು ಎಂದು ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ರಾದ ಬಿ.ಎನ್.ಗಿರೀಶ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!