ಭೈರಪ್ಪ ಹಾಗೂ ಸುಧಾ ಮೂರ್ತಿಗೆ ಪದ್ಮಭೂಷಣ ಎಸ್.ಎಂ. ಕೃಷ್ಣಗೆ ಪದ್ಮವಿಭೂಷಣ

ಬೆಂಗಳೂರು: ಸಾಹಿತಿ ಎಸ್.ಎಲ್. ಭೈರಪ್ಪ ಮತ್ತು ಸಮಾಜ ಸೇವಕಿ ಸುಧಾ ಮೂರ್ತಿ ಅವರು ಪದ್ಮ ಭೂಷಣ ಪ್ರಶಸ್ತಿಗಳಿಗೆ ಪಾತ್ರರಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್. ಕೃಷ್ಣ ಅವರು ಪದ್ಮವಿಭೂಷಣಕ್ಕೆ ಪಾತ್ರರಾಗಿದ್ದಾರೆ.
ರಾಜ್ಯದ ಎಂಟು ಸಾಧಕರಿಗೆ ಈ ಬಾರಿ ಪದ್ಮ ಪ್ರಶಸ್ತಿ ದೊರೆತಿದ್ದು, ಕೊಡಗಿನ ಜಾನಪದ ನರ್ತಕಿ ರಾಣಿ ಮಾಚಯ್ಯ, ವಿಜ್ಞಾನ ವಿಭಾಗದಲ್ಲಿ ಖಾದರ್ ವಲ್ಲಿ ದೂದೇಕುಲ, ಕಲಾ ವಿಭಾಗದಲ್ಲಿ ನಾಡೋಜ ಪಿಂಡಿಪಾಪನಹಳ್ಳಿ ಮುನಿ ವೆಂಕಟಪ್ಪ, ಷಾ ರಶೀದ್ ಅಹಮದ್ ಕಾದ್ರಿ ಹಾಗೂ ಪುರಾತತ್ವ ಶಾಸ್ತ್ರ ವಿಭಾಗದಲ್ಲಿ ಸುಬ್ಬರಾಮನ್ ಪದ್ಮ ಪ್ರಶಸ್ತಿ ಪಡೆದಿದ್ದಾರೆ.