ಫೆ.13, 14ರಂದು ಪಾಲಿಕೆ ಹೊರ ಗುತ್ತಿಗೆ ಚಾಲಕರ ಪ್ರತಿಭಟನೆ

ದಾವಣಗೆರೆ: ಮಹಾನಗರ ಪಾಲಿಕೆಯ ಹೊರಗುತ್ತಿಗೆ ಚಾಲಕರು ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಫೆ.13 ಹಾಗೂ 14ರಂದು ತ್ಯಾಜ್ಯ ವಿಲೇವಾರಿ ವಾಹನಗಳು ಸಂಚರಿಸುವುದು ಅನುಮಾನ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಪಾಲಿಕೆ ಹೊರಗುತ್ತಿಗೆ ಘನತ್ಯಾಜ್ಯ ವಿಲೇವಾರಿ ವಾಹನ ಚಾಲಕರ ಸಂಘದ ಅಧ್ಯಕ್ಷ ಎಂ.ಆರ್. ದುಗ್ಗೇಶ್ ಈ ಕುರಿತು ಮಾಹಿತಿ ನೀಡಿದ್ದಾರೆ.
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ಚಾಲಕರು, ನೀರಗಂಟಿಗಳು, ಲೋಡರ್ಸ್, ಕ್ಲೀನರ್ಸ್, ಹೆಲ್ಪರ್ಸ್, ಯೂಜಿಡಿ ಕಾರ್ಮಿಕರು ಸೇರಿದಂತೆ ಎಲ್ಲ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸುವಂತೆ ಆಗ್ರಹಿಸಿ, ಫೆ. 13, 14 ರಂದು ಪಾಲಿಕೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದವಹು ಹೇಳಿದ್ದಾರೆ.
ಅಷ್ಟೇ ಅಲ್ಲ, ಫೆ.15ರಂದು ‘ಹೊರಗುತ್ತಿಗೆ ನೌಕರರ ನಡಿಗೆ ಮುಖ್ಯಮಂತ್ರಿಗಳ ಮನೆ ಕಡೆಗೆ’ ಆಂದೋಲನವನ್ನೂ ಹಮ್ಮಿಕೊಳ್ಳಲಾಗಿದೆ ಎಂದು ಎಂದು ಅವರು ತಿಳಿಸಿದ್ದಾರೆ.
ಪಾಲಿಕೆ ಹೊರ ಗುತ್ತಿಗೆ ನೌಕರರನ್ನು ನೇರಪಾವತಿಯಡಿ ತಂದರೆ ಸರ್ಕಾರಕ್ಕೆ ಜಿಎಸ್ ಟಿ ಉಳಿತಾಯದ ಜೊತೆಗೆ ನೌಕರರಿಗೆ ಸೇವಾ ಭದ್ರತೆ ಹಾಗೂ ಏಜೆನ್ಸಿಗಳ ಕಿರುಕುಳ ತಪ್ಪಲಿದೆ ಎಂದವರು ಸಲಹೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಬಿ. ಸಂತೋಷ್, ಹೆಚ್.ಎಂ. ಕೊಟ್ರೇಶ್, ಜಿ.ಹೆಚ್. ಚಂದ್ರಪ್ಪ, ಎಂ. ರಮೇಶ್, ಮೈಲಾರಪ್ಪ, ಎನ್. ದ್ಯಾಮಣ್ಣ ಹಾಗೂ ನವೀನ್ ಕುಮಾರ್ ಉಪಸ್ಥಿತರಿದ್ದರು.