ಮಂಗಳೂರು: ಪಣಂಬೂರು ಬೀಚ್‌ನಲ್ಲಿ ಅಲೆಗಳ ರಭಸಕ್ಕೆ ಮೂವರು ಯುವಕರು ನಾಪತ್ತೆ

ಪಣಂಬೂರು ಬೀಚ್‌

ಮಂಗಳೂರು: ಪಣಂಬೂರು ಬೀಚ್‌ನಲ್ಲಿ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಲೈಫ್ ಗಾರ್ಡ್ ಸೂಚನೆ ಧಿಕ್ಕರಿಸಿ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳ ರಭಸಕ್ಕೆ ಮೂವರು ಯುವಕರು ನಾಪತ್ತೆಯಾಗಿದ್ದಾರೆ.

ಮಿಲನ್(20), ಲಿಖಿತ್(18) ಹಾಗೂ ನಾಗರಾಜ್ (24) ನಾಪತ್ತೆಯಾದ ಯುವಕರು. ನಾಪತ್ತೆಯಾದ ಯುವಕರಿಗಾಗಿ ಮುಳುಗತಜ್ಞರು ಹುಡುಕಾಟ ನಡೆಸುತ್ತಿದ್ದಾರೆ. ಮಿಲನ್‌ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿದ್ದ. ಲಿಖಿತ್‌ ಕೈಕಂಬದ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ನಾಗರಾಜ್‌ ಬೈಕಂಪಾಡಿಯ ಕಂಪನಿಯಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!