ಪರಿಶಿಷ್ಟ ವರ್ಗದ ಶಾಲೆಗೆ 444 ಶಿಕ್ಷಕರ ನೇಮಕಕ್ಕೆ ಸರ್ಕಾರದಿಂದ ಅನುಮೋದನೆ
ದಾವಣಗೆರೆ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಲ್ಮೀಕಿ ಆಶ್ರಮಶಾಲೆಗಳಲ್ಲಿ ಖಾಲಿರುವ ಒಟ್ಟು 444 ಶಿಕ್ಷಕರನ್ನು ನೇರ ನೇಮಕಾತಿ ಮೂಲಕ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಅನುಮೋದನೆ ನೀಡಿದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಾಲ್ಮೀಕಿ ಆಶ್ರಮ ಶಾಲೆ ಶಿಕ್ಷಕರ (1 ರಿಂದ 5 ನೇ ತರಗತಿ) ಹುದ್ದೆಗಳನ್ನು ನೇರ ನೇಮಕಾತಿ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲು ಸರ್ಕಾರ ಆದೇಶ ಹೊರಡಿಸಿರುವುದಾಗಿ ಸಮಾಜ ಕಲ್ಯಾಣ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಎನ್ ನಾಗರಾಜ್ ತಿಳಿಸಿದ್ದಾರೆ.