Part-2: ಹರಿಹರ ತುಂಗಭದ್ರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ; ಜಲಚರಗಳನ್ನು ರಕ್ಷಿಸಲು ಆಗ್ರಹ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹಲವಾರು ಗ್ರಾಮಗಳಲ್ಲಿ ತುಂಗಭದ್ರಾ ನದಿಯಿಂದ ಅಕ್ರಮ ಮರಳು ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಬೃಹತ್ ಯಂತ್ರಗಳನ್ನು ಬಳಸಿ ಗಣಿಗಾರಿಕೆ ನಡೆಸಲಾಗುತ್ತಿದೆ. ಜಲಚರಗಳನ್ನು ಹೆಕ್ಕಿ ತಿನ್ನುತ್ತಿವೆ ನೂತನವಾಗಿ ತಯಾರಿಸಿರುವ ಗೋಟ್ ಯಂತ್ರ.

ಹರಿಹರ ತಾಲೂಕಿನ ಗುತ್ತೂರು ಮತ್ತು ಹರ್ಲಾಪುರ ಪ್ರದೇಶದಲ್ಲಿ ತುಂಗಭದ್ರಾ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದೆ. ಹಸಿರು ಪೀಠದ ಆಧೇಶವನ್ನು ಉಲ್ಲಂಘಿಸಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಈ ಬಗ್ಗೆ ಹಲವರು ದೂರುಗಳನ್ನು ಕೊಟ್ಟಿರುವುದಾಗಿ ವರದಿಯಾಗಿದೆ. ಆದರೆ, ಅದನ್ನು ತಡೆಯುವ ಕೆಲಸವನ್ನು ಅಧಿಕಾರಿಗಳು ಮಾಡುತ್ತಿಲ್ಲ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರ್ಯಾಂಗಕ್ಕೆ ನಾಗರಿಕರು ಕೊಟ್ಟ ದೂರುಗಳ ಬಗ್ಗೆ ಪರಿಶೀಲಿಸಿ ಕಾನೂನು ಕ್ರಮಗಳನ್ನು ಜರುಗಿಸುವ ಗುರುತರ ಜವಾಬ್ದಾರಿ ಜಿಲ್ಲಾಧಿಕಾರಿಗಳಿಗೂ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೂ ಇದೆ. ಆದರೆ ಜಿಲ್ಲೆಯ ನಾಗರಿಕರ ಅಹವಾಲುಗಳನ್ನು ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ ಎಂಬ ಆರೋಪಗಳಿವೆ” ಎಂದು ಸಾರ್ವಜನಿಕವಾಗಿ ಕಿಡಿಕಾರಿದ್ದಾರೆ.

ತುಂಗಭದ್ರಾ ನದಿಗೆ ನುಗ್ಗಿ ಬಹಿರಂಗವಾಗಿ ಭಾರಿ ಗಾತ್ರದ ಯಂತ್ರೋಪಕರಣಗಳಿಂದ ಮರಳನ್ನು ಅಕ್ರಮವಾಗಿ  ಸರಬರಾಜು ಮಾಡಲಾಗುತ್ತಿದೆ. ಆದರೂ,ಮರಳು ಕಳ್ಳರ ವಿರುದ್ಧ ಯಾವುದೇ ಕ್ರಮವನ್ನು ತೆಗೆದುಕೊಳ್ಳದಿರುವುದು ಜಿಲ್ಲಾಡಳಿತದ ವೈಫಲ್ಯವಾಗಿದೆ. ಮಧ್ಯ ಕರ್ನಾಟಕದ ಜೀವನದಿ ತುಂಗಭದ್ರಾ ನದಿಯ ಮೂಲ ಸ್ವರೂಪಕ್ಕೆ ಸಕ್ಕೆ ತಂದಿರುವುದು  ಆಡಳಿತದ ವೈಫಲ್ಯದಿಂದ ಮುಂದಿನ ದಿನಗಳಲ್ಲಿ ಕಾಣೆಯಾಗಬಹುದು” ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ನೆಲದ ಕಾನೂನು ಎಲ್ಲರಿಗೂ ಒಂದೇ ಎನ್ನುವ ರೀತಿಯಲ್ಲಿ ಆಡಳಿತ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಜರುಗಿಸಬೇಕು. ಯಾವುದೇ ರೀತಿಯ ಮುನ್ಸೂಚನೆ ನೀಡದೆ ಆಗಾಗ್ಗೆ ನದಿಗಳ ಬಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಅಕ್ರಮವನ್ನು ತಡೆಯಬೇಕು” ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮುಂದುವರಿಯುವುದು…

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!