ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯದ ಪ್ರಾರ್ಥನ ಸ್ಥಳಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಶಾಂತಿಯುತ ಪ್ರತಿಭಟನೆ
ದಾವಣಗೆರೆ: ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಆರಿಫ್ ಖಾನ್ ಅವರ ನೇತೃತ್ವದಲ್ಲಿ
ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯದ ಪ್ರಾರ್ಥನ ಸ್ಥಳಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಇಂದು ಮಹಾನಗರ ಪಾಲಿಕೆ ಮುಂಬಾಗ
ಶಾಂತಿಯುತ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು ನಂತರ ಎಸಿ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರ ಡಿ ಬಸವರಾಜ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಕೆ ಶೆಟ್ಟಿ, ಎಸ್ ಮಲ್ಲಿಕಾರ್ಜುನ್, ಬ್ಲಾಕ್ ಅಧ್ಯಕ್ಷರುಗಳಾದ ಅಯೂಬ್ ಪೈಲ್ವಾನ್, ಕೆ ಜಿ ಶಿವಕುಮಾರ್, ಪಾಲಿಕೆ ವಿಪಕ್ಷ ನಾಯಕ ನಾಗರಾಜ್, ಸದಸ್ಯರಾದ ಜಿಎಸ್ ಮಂಜುನಾಥ್, ಅಬ್ದುಲ್ ಲತೀಫ್, ಸೈಯದ್ ಚಾರ್ಲಿ, ಸುಧಾ ಇಟ್ಟಿಗುಡಿ ಮಂಜುನಾಥ್, ಆಶಾ ಉಮೇಶ್, ಕ್ರೈಸ್ತ ಧರ್ಮಗುರುಗಳು ಅಲ್ಪಸಂಖ್ಯಾತ ಮುಖಂಡರು ಮುಂತಾದವರು ಉಪಸ್ಥಿತರಿದ್ದರು.