Petrol Price Reduce: ಸಂಜೆಯಿಂದ ಪೆಟ್ರೋಲ್ ಬೆಲೆ ಇಳಿಕೆಗೆ ಕ್ಷಣಗಣನೆ.! ಪೆಟ್ರೋಲ್ 95, ಡೀಸೆಲ್‌ 81 ರೂ ಕಡಿಮೆಯಾಗುವ ಸಾಧ್ಯತೆ – ಸಿಎಂ ಬೊಮ್ಮಾಯಿ

 

ಬೆಂಗಳೂರು :ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಸಿದ್ದು, ಜನರಿಗೆ ಮತ್ತಷ್ಟು ಹೆಚ್ಚಿನ ಅನುಕೂಲ ಕಲ್ಪಿಸಲು ರಾಜ್ಯ ಸರ್ಕಾರವೂ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ತಲಾ 7 ರೂ.ಗಳಷ್ಟು ಕಡಿಮೆ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ತಿಳಿಸಿದ್ದಾರೆ.

ನಾಳೆ ಸಂಜೆಯಿಂದ ಈ ದರ ಜಾರಿಯಾಗಲಿದೆ. ಕೇಂದ್ರ ಸರ್ಕಾರವು ಡೀಸಲ್ 10 ರೂ. ಹಾಗೂ ಪೆಟ್ರೋಲ್ 05 ರೂ. ಕಡಿಮೆಗೊಳಿಸಿದ್ದು ಸ್ವಾಗತಾರ್ಹ. ಜನರಿಗೆ ದೀಪಾವಳಿಯ ಉಡಗೊರೆ ನೀಡಿದ ಪ್ರಧಾನಿಗಳಿಗೆ ಮುಖ್ಯಮಂತ್ರಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ರಾಜ್ಯಸರ್ಕಾರವು ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ. ಕಡಿಮೆಗೊಳಿಸಲು ನಿರ್ಧರಿಸಿದೆ.

ಈ ನಿರ್ಧಾರದಿಂದ ರಾಜ್ಯಸರ್ಕಾರಕ್ಕೆ ಅಂದಾಜು 2,100 ಕೋಟಿ ರೂ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ರಾಜ್ಯದ ಜನತೆಗೆ ದೀಪಾವಳಿಯ ಉಡುಗೊರೆ, ಸರ್ವರಿಗೂ ದೀಪಾವಳಿಯ ಹಾರ್ದಿಕ ಶುಭಾಶಯಗಳು ಎಂದು ಮುಖ್ಯಮಂತ್ರಿಗಳು ತಿಳಿಸಿದರೆ .

 

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!