ph.d; ವಿವಿ ಗಿರೀಶ್ ಗೆ ಪಿಎಚ್.ಡಿ. ಪದವಿ
ದಾವಣಗೆರೆ, ಸೆ.09: ದಾವಣಗೆರೆ ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಿ.ಎಚ್.ಗಿರೀಶ ಅವರು ಅರ್ಥಶಾಸ್ತ್ರ ವಿಭಾಗದಲ್ಲಿ ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯವು ಪಿಎಚ್.ಡಿ. (ph.d) ಪದವಿ ಪ್ರದಾನ ಮಾಡಿದೆ.
application; ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಜಿ ಆಹ್ವಾನ
ಗಿರೀಶ ಅವರು ದಾವಣಗೆರೆ ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಮತ್ತು ಕುವೆಂಪು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಅವರ ಮಾರ್ಗದರ್ಶನದಲ್ಲಿ ‘ಮೈಕ್ರೋ ಫೈನಾನ್ಸ್ ಅಂಡ್ ವುಮೆನ್ ಎಂಪವರ್ ಮೆಂಟ್ ಇನ್ ಕರ್ನಾಟಕ: ಆನ್ ಎಂಪಿರಿಕಲ್ ಸ್ಟಡಿ ಇನ್ ದಾವಣಗೆರೆ ಡಿಸ್ಟ್ರಿಕ್ ಸಂಶೋಧನಾ ಪ್ರಬಂಧ ಮಂಡಿಸಿದ್ದರು.
**
ಎಂ.ಆರ್.ಕುಮಾರಗೆ ಪಿಎಚ್.ಡಿ. ಪದವಿ
ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯ ವಾಣಿಜ್ಯ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಂ.ಆರ್. ಕುಮಾರ ಅವರು ವಾಣಿಜ್ಯಶಾಸ್ತç ವಿಭಾಗದಲ್ಲಿ ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಶಿವಮೊಗ್ಗ ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾನಿಲಯವು ಪಿಎಚ್.ಡಿ. ಪದವಿ ಪ್ರದಾನ ಮಾಡಿದೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಗೊಲ್ಲರಹಳ್ಳಿ ಗ್ರಾಮದ ಕುಮಾರ ಅವರು ಕುವೆಂಪು ವಿಶ್ವವಿದ್ಯಾನಿಲಯ ಕಡೂರು ಸ್ನಾತಕೋತ್ತರ ಕೇಂದ್ರದ ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಎಚ್.ಶೋಭಾರಾಣಿ ಅವರ ಮಾರ್ಗದರ್ಶನದಲ್ಲಿ ‘ಹುಮನ್ ರಿಸೋರ್ಸ್ ಮ್ಯಾನೇಜ್‌ಮೆಂಟ್ ಪ್ರಾಕ್ಟೀಸಿಸ್ ಇನ್ ಸ್ಮಾಲ್ ಸ್ಮಾಲ್ ಅಂಡ್ ಮೀಡಿಯಮ್ ಸ್ಕೇಲ್ ಎಂಟರ್‌ಪ್ರೆöÊಸಿಸ್- ಆನ್ ಎಂಪಿರಿಕಲ್ ಸ್ಟಡಿ’ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿದ್ದರು.