ಪಿಹೆಚ್ಡಿ ಸಂಶೋಧನೆಗೆ ಶಿಷ್ಯವೇತನ : ಅರ್ಜಿ ಆಹ್ವಾನ
ದಾವಣಗೆರೆ: ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ವಿಜ್ಞಾನ ಮತ್ತು ಇಂಜಿನಿಯರಿಂಗ್ ಪಿ.ಹೆಚ್.ಡಿ ಸಂಶೋಧನೆಗೆ ಕರ್ನಾಟಕ ಡಿ.ಎಸ್.ಟಿ.-ಪಿ.ಹೆಚ್.ಡಿ ಶಿಷ್ಯವೇತನಕ್ಕೆ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿ.ಎಸ್.ಟಿ ) ವಿಜ್ಞಾನ ಮತ್ತು ಇಂಜಿನಿಯರಿಂಗ್ನಲ್ಲಿ ಪಿ.ಹೆಚ್.ಡಿ ಸಂಶೋಧನೆಗೆ ಕರ್ನಾಟಕ ಡಿ.ಎಸ್.ಟಿ.-ಪಿ.ಹೆಚ್.ಡಿ ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ ಅನುಷ್ಟಾನಗೊಳಿಸುತ್ತಿದೆ.
2021-22 ನೇ ಸಾಲಿನ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿAಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಸಂಸ್ಥೆ ಹಾಗೂ ಕಾಲೇಜುಗಳಲ್ಲಿ ಈಗಾಗಲೇ ಪಿ.ಹೆಚ್.ಡಿ ಪದವಿಗೆ ನೋಂದಾಯಿತರಾಗುವ ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸೆ. 06 ರಂದು ಸಂಜೆ 5 ಗಂಟೆಯೊಳಗೆ ಸಲ್ಲಿಸಲು ಎಂದು ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.