ph.d: ಶಾಮನೂರು ಶಿವಶಂಕರಪ್ಪನವರಿಗೆ ಗೌರವ ಡಾಕ್ಟರೇಟ್
ದಾವಣಗೆರೆ, ಅ.21: ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶಾಮನೂರು ಶಿವಶಂಕರಪ್ಪನವರಿಗೆ ವಿಜಯಪುರದ ಬಿಎಲ್‍ಡಿಇ ಡೀಮ್ಡ್ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ (ph.d) ಪದವಿ ನೀಡಿ ಗೌರವಿಸಿತು.
ಶ್ರೀ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ದಿಂದ ಬಿಎಲ್‍ಡಿಇ ಸಭಾಂಗಣದಲ್ಲಿ ನಡೆದ ಡೀಮ್ಡ್ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವದಲ್ಲಿ ಶಾಮನೂರು ಶಿವಶಂಕರಪ್ಪನವರ ಸಮಾಜ ಸೇವೆ ಮತ್ತು ಶಿಕ್ಷಣ ಸೇವೆಯನ್ನು ಗುರುತಿಸಿ ಈ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.
ವೈದ್ಯಕೀಯ ಶಿಕ್ಷಣ ಸಚಿವ ಡಾ|| ಶರಣ ಪ್ರಕಾಶ್ ಪಾಟೀಲ್ ಮತ್ತು ಬಿಎಲ್‍ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಶಾಮನೂರು ಶಿವಶಂಕರಪ್ಪನವರಿಗೆ ಪದವಿ ನೀಡಿ ಗೌರವಿಸಿದರು.
police; ಹುತಾತ್ಮ ಸಿಬ್ಬಂದಿಯ ಗುಂಪು ವಿಮಾ ಮೊತ್ತ 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ: ಸಿದ್ದರಾಮಯ್ಯ
ಈ ಸಂದರ್ಭದಲ್ಲಿ ಬಿಎಲ್‍ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಆರ್.ಎಸ್.ಮುಧೋಳ್, ಸಮಕುಲಾಧಿಪತಿಗಳಾದ ವೈ.ಎಂ. ಜಯರಾಜ್, ಅರುಣ್ ಸಿ.ಇನಾಂದಾರ್, ವಿಧಾನಪರಿಷತ್ ಸದಸ್ಯ ಸುನೀಲ್ ಗೌಡ ಪಾಟೀಲ್, ಗಣ್ಯರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಎಸ್ಸೆಸ್‍ಗೆ 4 ಗೌರವ ಡಾಕ್ಟರೇಟ್:
ಶಾಮನೂರು ಶಿವಶಂಕರಪ್ಪನವರ ಸಮಾಜಸೇವೆ ಮತ್ತು ಶಿಕ್ಷಣ ಸೇವೆಯನ್ನು ಗುರುತಿಸಿ ಇದುವರೆಗೂ ಒಟ್ಟು 4 ಗೌರವ ಡಾಕ್ಟರೇಟ್ ಗಳು ಸಂದಿವೆ.
15 ವರ್ಷಗಳ ಹಿಂದೆ ಮೊದಲ ಬಾರಿಗೆ ಕುವೆಂಪು ವಿಶ್ವವಿದ್ಯಾಲಯ ನಂತರ ದಾವಣಗೆರೆ ವಿಶ್ವವಿದ್ಯಾಲಯ, ಕಳೆದ 2 ವರ್ಷಗಳ ಹಿಂದೆ ಶರಣ ಬಸವ ಡೀಮ್ಡ್ ವಿಶ್ವವಿದ್ಯಾಲಯ ಹಾಗೂ ಇಂದು ಬಿಎಲ್‍ಡಿಇ ಡೀಮ್ಡ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.