ಸರ್ಕಾರಿ ಕಚೇರಿಗಳಲ್ಲಿ ಪೋಟೋ ವಿಡಿಯೋ ವಿವಾದ.! ತಡರಾತ್ರಿ ‘ಆದೇಶ ವಾಪಸ್’ ಪಡೆದ ಸರ್ಕಾರ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖಾ ಕಚೇರಿಗಳಲ್ಲಿ ಅನುಮತಿ ಇಲ್ಲದೆ ಸಾರ್ವಜನಿಕರು ಫೋಟೋ, ವಿಡಿಯೋ ತೆಗೆಯುವುದನ್ನು ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿತ್ತು, ಈ ಆದೇಶವನ್ನು ಜುಲೈ15 ರ ರಾತ್ರಿ ವಾಪಾಸ್ ಪಡೆಯಲಾಗಿದೆ.
ಸರ್ಕಾರಿ ನೌಕರರ ಸಂಘದ ಮನವಿಯ ಮೇರೆಗೆ ಸರ್ಕಾರ ಆದೇಶ ಹೊರಡಿಸಿತ್ತು, ಆ ಆದೇಶಕ್ಕೆ ರಾಜ್ಯದಲ್ಲಿ ತೀವ್ರ ಆಕ್ಷೇಪಣೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ, ವಿಡಿಯೋ ತೆಗೆಯಬಾರದು ಎನ್ನುವ ಆದೇಶವನ್ನು ತಡರಾತ್ರಿ ವಾಪಾಸ್ ಪಡೆಯಲಾಗಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿದ ಸುಧಾರಣೆ ಇಲಾಖೆ (ಸೇವೆಗಳು) ಇವರು ಆದೇಶ ಹೊರಡಿಸಿದ್ದಾರೆ.