ಫೊಟೊಗ್ರಾಫರ್ ಎಂ.ಮನು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆ

ದಾವಣಗೆರೆ: ದಾವಣಗೆರೆಯಲ್ಲಿ ಗುರುವಾರ ಸಂಜೆ ನಡೆದ ಕಾಂಗ್ರೆಸ್‌ನ ಪ್ರಜಾ ಧ್ವನಿ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ.ಕೆ. ಶಿವಕುಮಾರ, ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪನವರು, ಮಾಜಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್‌ರವರು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಬಿ. ಮಂಜಪ್ಪನವರು, ಮಹಾನಗರ ಪಾಲಿಕೆ ಸದಸ್ಯ ಎ.ನಾಗರಾಜರವರ ಸಮ್ಮುಖದಲ್ಲಿ ನಗರದ ಯುವ ಮುಖಂಡ ಎಂ.ಮನು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ತಮ್ಮ ಅಪಾರ ಬೆಂಬಲಿಗರೊದಿಗೆ ಸೇರ್ಪಡೆಗೊಂಡರು.


ಎಂ .ಮನು ದಾವಣಗೆರೆ ಜಿಲ್ಲಾ ರವಿಚಂದ್ರನ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷರಾಗಿ, ತಾಲೂಕು ಫೋಟೋ ಮತ್ತು ವೀಡಿಯೋಗ್ರಾಫರ್ ಸಂಘದ ಅಧ್ಯಕ್ಷರಾಗಿ, ಕನ್ನಡ ಸಮರ ಸೇನೆ ಯುವ ಘಟಕದ ರಾಜ್ಯಾಧ್ಯಕ್ಷರಾಗಿ. ಕನಕ ಯುವ ಸೇನೆ ಜಿಲ್ಲಾ ಉಪಾಧ್ಯಕ್ಷರಾಗಿ, ವೃತ್ತಿನಿರತ ಫೋಟೋಗ್ರಾಫರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರ ಡಿ.ಬಸವರಾಜರವರು , ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ ಕೆ.ಶೆಟ್ಟಿ ರವರು ಅಬ್ದುಲ್ ಲತೀಫ್ ರವರು , ಕೆ.ಎಸ್.ಬಸವಂತಪ್ಪ ರವರು , ಶಿವಗಂಗಾ ಬಸವರಾಜರವರು ಡೋಲಿ ಚಂದ್ರು ರವರು , ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.

Leave a Reply

Your email address will not be published. Required fields are marked *

error: Content is protected !!