ಶಿವಕುಮಾರಶ್ರೀ, ಸಿದ್ದೇಶ್ವರಶ್ರೀಗಳ ಪುಣ್ಯ ಸ್ಮರಣೆ ನಾಳೆ

ದಾವಣಗೆರೆ: ನಡೆದಾಡುವ ದೇವರೆಂದೇ ಪ್ರಖ್ಯಾತರಾದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಹಾಗೂ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮಿಗಳವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಜ.೨೨ ರಂದು ಸಂಜೆ ೬ ಗಂಟೆಗೆ ನಗರದ ಬಿಐಇಟಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಚಿತ್ರದುರ್ಗ ಮುರುಘಾಮಠದ ಪ್ರಭಾರ ಮಠಾಧೀಶರಾದ ಶ್ರೀ ಬಸವಪ್ರಭು ಮಹಾಸ್ವಾಮೀಜಿಗಳ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವ್ಯಂಗ್ಯ ಚಿತ್ರಕಾರ, ಹಿರಿಯ ಪತ್ರಕರ್ತ ಹೆಚ್.ಬಿ. ಮಂಜುನಾಥ ಅವರನ್ನು ಸನ್ಮಾನಿಸಲಾಗುತ್ತಿದ್ದು,  ಬಸವ ಕಲಾ ಲೋಕದಿಂದ ಭಜನೆ ನಡೆಯಲಿದೆ.

Leave a Reply

Your email address will not be published. Required fields are marked *

error: Content is protected !!