ಗಿಡಗಳ ಸರಬರಾಜು : ಆಸಕ್ತ ನರ್ಸರಿಯವರಿಗೆ ಸೂಚನೆ

ದಾವಣಗೆರೆ: ಪ್ರಸಕ್ತ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸರ್ಕಾರಿ ಶಾಲೆ, ಕಾಲೇಜು, ಆಸ್ಪತ್ರೆ, ವಸತಿ ನಿಲಯಗಳ ಆವರಣದಲ್ಲಿ ಪೌಷ್ಠಿಕ ಕೈತೋಟ ಅಭಿಯಾನ ಕೈಗೊಳ್ಳಲು ಸಸಿ, ಕಸಿ ಗಿಡಗಳಾದ ನುಗ್ಗೆ, ಸಪೋಟ, ಮಾವು, ಪಪ್ಪಾಯ, ನಿಂಬೆ, ಕರಿಬೇವು ಹಾಗೂ ಇತರೆ ತೋಟಗಾರಿಕೆ ಬೆಳೆಗಳನ್ನು ಸರಬರಾಜು ಮಾಡಲು ಉದ್ದೇಶಿಸಲಾಗಿದ್ದು, ಆಸಕ್ತ ನರ್ಸರಿಯವರು ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಉಪನಿರ್ದೇಶಕರು, ದಾವಣಗೆರೆ ಇವರನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.