ಪ್ರಧಾನಿ ಮೋದಿಗೆ ಮಾತೃವಿಯೋಗ: ಶತಾಯುಷಿ ಹೀರಾಬೆನ್ ವಿಧಿವಿಶ

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ವಿಧಿವಶರಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಅವರು ಕೆಲವು ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಾಗಿದ್ದರು. ಇದ್ದಕ್ಕಿದ್ದಂತೆ ಅವರು ಅಸ್ವಸ್ಥರಾಗಿದ್ದರಿಂದ ಅಹಮದಾಬಾದ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಹೀರಾಬೆನ್ ಅವರಿಗೆ 100 ವರ್ಷ ವಯಸ್ಸು. ಕೆಲ ಸಮಯದ ಹಿಂದಷ್ಟೇ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಮಂಗಳವಾರ ಮತ್ತೆ ಅವರು ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆಗೆ ಅವರು ಸ್ಪಂಧಿಸಿಲ್ಲವೆನ್ನಲಾಗಿದೆ.