ದಾವಣಗೆರೆ|pocso act ಅಪ್ರಾಪ್ತೆ ಜೊತೆ ಮದುವೆ ಹಾಗೂ ಲೈಂಗಿಕ ಕಿರುಕುಳ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ
ದಾವಣಗೆರೆ: ಅಪ್ರಾಪ್ತೆಯೊಂದಿಗೆ ಮದುವೆಯಾಗಿ ಲೈಂಗಿಕ ಕಿರುಕುಳ ನೀಡಿದ ಕಳೆದ ೦5 ವರ್ಷಗಳ ಹಿಂದೆ ಜರುಗಿದ ಪ್ರಕರಣವೊಂದರ ಅಪರಾಧಕ್ಕಾಗಿ ದಾವಣಗೆರೆಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗೆ ಪೋಕ್ಸೋ ಕಾಯ್ದೆಯಡಿ 10 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 35 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
Incident
ದಾವಣಗೆರೆಯ ಪಿಜಿ ಯಲ್ಲಿ ಇದ್ದುಕೊಂಡು ಎವಿಕೆ ಕಾಲೇಜಿನಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಉದಯ್ ಎಂಬಾತ, ಪ್ರೀತಿಸುವುದಾಗಿ ನಂಬಿಸಿ, ಹೆದರಿಸಿ, ಪುಸಲಾಯಿಸಿಕೊಂಡು ಕರೆದುಕೊಂಡು ಹೋಗಿ, ಮಂತ್ರಾಲಯದಲ್ಲಿ ಅವಳ ಕೊರಳಿಗೆ ತಾಳಿ ಕಟ್ಟಿ, ಅಲ್ಲಿಂದ ವಿಜಯವಾಡ, ನಂತರ ಬಸವನ ಕ್ಯಾಂಪ್‌ನಲ್ಲಿನ ತಮ್ಮ ಸಮೀಪದ ಬಂಧುಗಳ ಮನೆಗೆ ಕರೆದುಕೊಂಡು ಹೋಗಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಹಲವು ಬಾರಿ ಲೈಂಗಿಕ ಅತ್ಯಾಚಾರ ನಡೆಸಿರುತ್ತಾನೆ. ಈ ಕುರಿತಂತೆ ಅಪ್ರಾಪ್ತೆಯ ತಾಯಿ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಗ್ರಾಮವೊಂದರ ಮಹಿಳೆ ದಾವಣಗೆರೆ ಮಹಿಳಾ ಪೊಲೀಸ್ ಠಾಣೆಯಲ್ಲಿ 2017 ರಲ್ಲಿ ದೂರು ದಾಖಲಿಸಿದ್ದರು.
Davanagere Women’s Station IO
ದಾವಣಗೆರೆ ಮಹಿಳಾ ಪೊಲೀಸ್ ಠಾಣೆಯ ತನಿಖಾಧಿಕಾರಿ ನಾಗಮ್ಮ ಕೆ. ಅವರು, ಪ್ರಕರಣದ ಬಗ್ಗೆ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
Pocso Court Judge Order
ಪ್ರಕರಣದ ವಿಚಾರಣೆ ನಡೆಸಿದ ದಾವಣಗೆರೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವೂ ಆಗಿರುವ ವಿಶೇಷ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಪಾದ್ ಎನ್ ಅವರು, ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ 35 ಸಾವಿರ ರೂ. ಗಳ ದಂಡ ವಿಧಿಸಿದ್ದು, ಸಂತ್ರಸ್ತೆಗೆ ಪರಿಹಾರವಾಗಿ 4.33 ಲಕ್ಷ ರೂ. ನೀಡುವಂತೆ ಜಿಲ್ಲಾ ಉಚಿತ ಸೇವಾ ಪ್ರಾಧಿಕಾರಕ್ಕೆ ಸಲ್ಲಿಸುವಂತೆ ನಿರ್ದೇಶನ ನೀಡಿದೆ.
Public Prosecutor
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ರೇಖಾ ಎಸ್. ಕೋಟೆಗೌಡರ್ ಅವರು ಪೋಕ್ಸೋ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ಅಪ್ರಾಪ್ತೆಯೊಂದಿಗೆ ಮದುವೆ ಮಾಡಿಕೊಳ್ಳುವುದು ಹಾಗೂ ಲೈಂಗಿಕ ಕಿರುಕುಳ ನೀಡುವುದು ಪೋಕ್ಸೋ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ರೇಖಾ ಅವರು ತಿಳಿಸಿದ್ದಾರೆ.
ಸುದ್ದಿಗಾಗಿ ಸಂಪರ್ಕಿಸಿ:- garudavoice21@gmail.com 9740365719