POCSO : ಪೋಕ್ಸೋ ಕಾನೂನಿನ ಅರಿವು ಮತ್ತು ಮಕ್ಕಳ ಹಕ್ಕುಗಳ ಕುರಿತು ಜಿಲ್ಲಾ ಮಟ್ಟದ ಕಾರ್ಯಗಾರ
ದಾವಣಗೆರೆ : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಉತ್ತರ ವಲಯ ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜುಲೈ 21 ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಹೊಸ ಕೋರ್ಟ್ ಹಿಂಭಾಗದಲ್ಲಿರುವ ಲಯನ್ಸ್ ಭವನದಲ್ಲಿ ಪೋಕ್ಸೋ ಕಾನೂನಿನ ಅರಿವು ಹಾಗೂ ಮಕ್ಕಳ ಹಕ್ಕುಗಳ ಬಗ್ಗೆ ಜಿಲ್ಲಾ ಮಟ್ಟದ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ ಎನ್. ಹೆಗಡೆ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ತಿಪ್ಪೇಶಪ್ಪ ಜಿ.ಆರ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ. ಮ. ಕರೆಣ್ಣವರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಅರುಣ್ ಕುಮಾರ್ ಎಲ್.ಹೆಚ್, ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಅಂಬಣ್ಣ. ಟಿ, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಜಿ.ಕೆ ಬಸವರಾಜು ಗೋಪನಾಳ್, ಜಿಲ್ಲಾ ವಕೀಲರ ಸಂಘದ ಸಹಕಾರ್ಯದರ್ಶಿ ಎ.ಎಸ್ ಮಂಜುನಾಥ್ ಭಾಗವಹಿಸುವರು.
ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಬಸವರಾಜ್. ಎಸ್ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುವರು.