Cricket Betting: ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಓರ್ವನ ಬಂಧನ: 58 ಸಾವಿರ ನಗದು ವಶ

cricket-betting-app-3424

ದಾವಣಗೆರೆ: ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ನಡೆಸಿರುವ ಪೊಲೀಸರು ಓರ್ವನನ್ನು ಬಂಧಿಸಿದ್ದು, ಆರೋಪಿಯಿಂದ 58 ಸಾವಿರ ರೂ., ನಗದು ವಶಕ್ಕೆ ಪಡೆದಿದ್ದಾರೆ.

ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯ ರತ್ನಮ್ಮ ಹಾಸ್ಟೆಲ್ ಮತ್ತು ಡಯೆಟ್ ಕಾಲೇಜ್ ಮದ್ಯಭಾಗದ ಸಾರ್ವಜನಿಕ ರಸ್ತೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಆಡುತ್ತಿದ್ದ ವ್ಯಕ್ತಿಯನ್ನು ಹಿಡಿದು, ಅವನಿಂದ 58 ನಗದು ಹಣ ಮತ್ತು 02 ಮೊಬೈಲ್‌ಗಳನ್ನು ಅಮಾನತ್ತುಪಡಿಸಿಕೊಂಡಿದ್ದು, ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಇತರರು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಜಿಲ್ಲಾ ಪೊಲೀಸ್ ಕಚೇರಿಯ ಡಿಸಿಆರ್‌ಬಿ ಘಟಕದ ಪೊಲೀಸ್ ಉಪಾಧೀಕ್ಷಕ ಬಿ.ಎಸ್. ಬಸವರಾಜ್ ಮತ್ತು ಅಧಿಕಾರಿ ಸಿಬ್ಬಂದಿಗಳು ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ನಡೆಸಿದ್ದು‌, ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!