ಅಕ್ರಮ ಮರಳು ಸಂಗ್ರಹಣೆ ಅಡ್ಡೆ ಮೇಲೆ ಪೊಲೀಸ್ ಇಲಾಖೆ ದಾಳಿ!

ದಾವಣಗೆರೆ: ತುಂಗಾಭದ್ರಾ ನದಿ ತೀರದಿಂದ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡಿ ಒಂದೆಡೆ ಸಂಗ್ರಹಿಸಿದ್ದ ಮರಳು ಅಡ್ಡೆಯ ಮೇಲೆ ಪೊಲೀಸ್ ಇಲಾಖೆ ದಾಳಿ ನಡೆಸಿದ್ದು, 5 ಲಕ್ಷದ 65 ಸಾವಿರದ 200 ರೂಗಳ ಮೊತ್ತದ ಮರಳನ್ನು ವಶಪಡಿಸಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕು ವ್ಯಾಪ್ತಿಯ ಹಲಗೇರಿ ಪೊಲೀಸ್ ಠಾಣಾ ಸರಹದ್ದಿನ ಕೋಟಿಹಾಳ ಗ್ರಾಮದಲ್ಲಿ ತುಂಗಭದ್ರಾ ನದಿ ತೀರದಿಂದ ಮರಳನ್ನು ಅಕ್ರಮವಾಗಿ ಸಂಗ್ರಹಣೆ ಮಾಡಲಾಗಿತ್ತು. ಈ ಮರಳು ಅಡ್ಡೆಯ ಮೇಲೆ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಟಿ.ವಿ ಸುರೇಶ್, ಡಿವೈಎಸ್‌ಪಿ ರಾಣೇಬೆನ್ನೂರು ಉಪ ವಿಭಾಗ ಹಾಗೂ ಶ್ರೀಮತಿ ಭಾಗ್ಯವತಿ ಬಂತಿ ಸಿಪಿಐ ಕುಮಾರಪಟ್ಟಣ ವೃತ್ತ, ಮೇಘರಾಜ ಎಂ.ವಿ., ಪಿಎಸ್‌ಐ ಹಲಗೇರಿ ಮತ್ತು ಸಿಬ್ಬಂದಿಗಳನ್ನೊಳಗೊ0ಡ ತಂಡ ದಾಳಿ ಮಾಡಿ ಸುಮಾರು 565200/- ರೂ ಮೊತ್ತದ 498 ಕ್ಯೂಬಿಕ್ ಮೀಟರ್ ಮರಳನ್ನು ವಶಪಡಿಸಿಕೊಳ್ಳುವಲ್ಲಿ ಸಫಲವಾಗಿದ್ದಾರೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

garudavoice21@gmail.com 9740365719

Leave a Reply

Your email address will not be published. Required fields are marked *

error: Content is protected !!