police; ದೇಶ ರಕ್ಷಣೆ, ಸಮಾಜ ಹಿತಕ್ಕಾಗಿ, ಜೀವ ಬಲಿದಾನ ಮಾಡಿದವರು ಮಹಾನ್ ವ್ಯಕ್ತಿಗಳು: ಡಾ. ವೆಂಕಟೇಶ್ ಎಂ.ವಿ.

ದಾವಣಗೆರೆ, ಅ.21: ದೇಶದ ರಕ್ಷಣೆ, ಸಮಾಜದ ಹಿತಕ್ಕಾಗಿ ತಮ್ಮ ಜೀವವನ್ನು ಬಲಿದಾನ ಮಾಡಿದಂತಹ ಮಹಾನ್ ವ್ಯಕ್ತಿಗಳನ್ನು ಸ್ಮರಿಸುವ ದಿನ  ಇದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು. ಅವರು ನಗರದ ಜಿಲ್ಲಾ ಪೊಲೀಸ್ (police) ಕವಾಯತು ಮೈದಾನದಲ್ಲಿ ಶನಿವಾರ ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಪಿಸಿ ಅವರು ಮಾತನಾಡಿದರು.

ಈ ದಿನ ವಿಶೇಷವಾಗಿರುವ ಅವಿಸ್ಮರಣೀಯ ದಿನವಾಗಿದ್ದು, ದಿನದ 24 ಗಂಟೆಗಳೂ ತಮ್ಮ ನಿಸ್ವಾರ್ಥ ಸೇವೆಯ ಮೂಲಕ ಸಮಾಜದ ರಕ್ಷಣೆ, ಸ್ವಾಸ್ಥ್ಯ ಕಾಪಾಡುವಲ್ಲಿ ಪೊಲೀಸರ ಪಾತ್ರ ಪ್ರಮುಖವಾದುದು. ಸೈನಿಕರು ಸಹ ನಮ್ಮ ದೇಶವನ್ನು ಹೊರಗಿನ ಶತ್ರುಗಳಿಂದ ಕಾಪಾಡುವ ಮೂಲಕ ಹಾಗೂ ಜನರನ್ನು ಸಂರಕ್ಷಣೆ ಮಾಡಿ ಸಮಾಜಕ್ಕೆ ಉತ್ತಮ ಬದುಕನ್ನು ಕಟ್ಟಿಕೊಡುವಲ್ಲಿ ಶ್ರಮಿಸುತ್ತಿದ್ದಾರೆ ಎಂದರು.

ph.d: ಶಾಮನೂರು ಶಿವಶಂಕರಪ್ಪನವರಿಗೆ ಗೌರವ ಡಾಕ್ಟರೇಟ್

ಪೊಲೀಸರು ಹಲವು ಮಜಲುಗಳಲ್ಲಿ ಈ ಸಮಾಜದ ಸಂರಕ್ಷಣೆ ಮಾಡುತ್ತಿದ್ದಾರೆ. ಅತ್ಯುತ್ತಮವಾದೀ ನಿಟ್ಟಿನಲ್ಲಿ ಅತ್ಯತ್ತಮವಾಗಿ ಕೆಲಸ ನಿರ್ವಹಿಸುತ್ತಾ ಬಂದಿದ್ದಾರೆ. ಪ್ರಮುಖವಾಗಿ ಸಮಾಜದಲ್ಲಿರುವ ಸಂಘರ್ಷಗಳನ್ನು ಕಡಿಮೆ ಮಾಡಿ, ಅವುಗಳನ್ನು ನಿಯಂತ್ರಿಸುವಲ್ಲಿ ಪೊಲೀಸರ ಪಾತ್ರ ವಿಶೇಷವಾದದ್ದು. ಈ ಸಂಘರ್ಷ ತಡೆಗಟ್ಟಲು ತಮ್ಮ ಬದುಕನ್ನೇ  ಮುಡುಪಾಗಿಟ್ಟು ಹಲವು ಸಂದರ್ಭಗಳಲ್ಲಿ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ ಎಂದರು.

ನಮ್ಮ ದೇಶದ ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಸಹ ಪೊಲೀಸರ ಪಾತ್ರ ಪ್ರಮುಖವಾಗಿದು. ಈ ದಿನವನ್ನು  ದೇಶದಾದ್ಯಂತ ಹುತ್ಮತರ ಸ್ಮರಣೆ ಮಾಡಲಾಗುತ್ತಿದೆ ಎಂದರು.

gratuity; ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್, ತುಟ್ಟಿಭತ್ಯೆ ಏರಿಕೆ

ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮಗೊಂಡ ಬಸರಗಿ ಮಾತನಾಡಿ, ಕರ್ತವ್ಯ ಪಾಲನೆಯಲ್ಲಿ ಪ್ರತಿ ವರ್ಷ ದೇಶದಲ್ಲಿ ಅನೇಕ ಪೊಲೀಸ್ ಸಿಬ್ಬಂದಿಗಳು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಅಂತಹವರ ಸ್ಮರಣೆಗಾಗಿ ಪ್ರತಿ ವರ್ಷ ಅ. 21ರಂದು ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಅಂತಹವರನ್ನು ಸ್ಮರಿಸುವ ದಿನ ಇದಾಗಿದೆ ಎಂದರು.

ಪೂರ್ವ ವಲಯ ಪೊಲೀಸ್ ಉಪ ಮಹಾ ನಿರೀಕ್ಷಕ ಡಾ.ಕೆ.ತ್ಯಾಗರಾಜನ್ ಅಧ್ಯಕ್ಷತೆ ವಹಿಸಿದ್ದರು. ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ನಿವೃತ್ತ ಪೊಲೀಸ್ ಅಧಿಕಾರಿಗಳು, ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!