ಪೊಲೀಸರು ಆಸ್ತಿ ಖರೀದಿ, ಮಾರಾಟಕ್ಕೆ ಅನುಮತಿ ಕಡ್ಡಾಯ

ಬೆಂಗಳೂರು: ಇತ್ತೀಚೆಗೆ ಐಟಿ ಅಧಿಕಾರಿಗಳು ಹಾಗೂ ಲೋಕಾಯುಕ್ತರು ದಾಳಿ ನಡೆಸುವ ಸಂದರ್ಭದಲ್ಲಿ ಬೇನಾಮಿ ಆಸ್ತಿ ಹೆಚ್ಚಾಗಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ಪೊಲೀಸರು ಇನ್ನು ಯಾವುದೇ ಆಸ್ತಿ, ಖರೀದಿ, ಮಾರಾಟ ಅಥವಾ ಉಡುಗೊರೆ ರೂಪದಲ್ಲಿ ಪಡೆಯಲು ಅರ್ಜಿ ಸಲ್ಲಿಸಿ ಅನುಮತಿ ಕಡ್ಡಾಯವಾಗಿದೆ. ಅದಕ್ಕಾಗಿ ದಾಖಲಾತಿಗಳನ್ನೂ ನೀಡಬೇಕಿದೆ.

ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎ, ಬಿ ಮತ್ತು ಸಿ ದರ್ಜೆಯ (ಐಪಿಎಸ್ ಅಧಿಕಾರಿಗಳನ್ನು ಹೊರತುಪಡಿಸಿ) ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಿರ-ಚರಾಸ್ತಿಯನ್ನು ಖರೀದಿಸಲು, ಮಾರಾಟ ಮಾಡಲು ಹಾಗೂ ಉಡುಗೊರೆ ರೂಪದಲ್ಲಿ ಪಡೆಯುವ ಮುನ್ನ ಪ್ರಾಧಿಕಾರದಿಂದ ಅನುಮತಿ ಪಡೆಯುವ ನಿಯಮವನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಿರುವ ರಾಜ್ಯ ಪೊಲೀಸ್ ಇಲಾಖೆ, ಆಸ್ತಿ ವ್ಯವಹಾರಕ್ಕೆ ಸಂಬಂಧಪಟ್ಟಂತೆ ಸ್ಪಷ್ಟ ದಾಖಲಾತಿಗಳನ್ನು ಸಲ್ಲಿಸಲು ಆದೇಶಿಸಿದೆ.

ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು 2021ರ ನಿಯಮ 24 ಅನ್ವಯ ಚರಾಸ್ತಿ, ಸ್ಥಿರಾಸ್ತಿ ಮತ್ತು ಬೆಲೆಬಾಳುವ ಸ್ವತ್ತು ಉಪ ನಿಯಮ (3) ಪ್ರಕಾರ ಸರ್ಕಾರಿ ನೌಕರ ಅಥವಾ ಆತನ ಕುಟುಂಬ ಸದಸ್ಯರ ಹೆಸರಲ್ಲಿ ಆಸ್ತಿ ಖರೀದಿಸುವ ಮೊದಲೇ ಪ್ರಾಧಿಕಾರಕ್ಕೆ ತಿಳಿಸಬೇಕು.
ಪ್ರಾಧಿಕಾರದ ಗಮನಕ್ಕಿಲ್ಲದೆ ಗುತ್ತಿಗೆ, ಅಡಮಾನ, ಖರೀದಿ, ಮಾರಾಟ, ಉಡುಗೊರೆ ಮೂಲಕ ಪಡೆಯಲು ಅವಕಾಶ ಇಲ್ಲ. ಒಂದು ವೇಳೆ ಪ್ರಾಧಿಕಾರಕ್ಕೆ ತಿಳಿಸದೆ ಇಂತಹ ವ್ಯವಹಾರ ಮಾಡಿದ್ದಲ್ಲಿ 2 ತಿಂಗಳ ಒಳಗಾಗಿ ಪೂರಕ ದಾಖಲಾತಿಗಳು ಹಾಗೂ ಸಮರ್ಥನೀಯ ಕಾರಣಗಳೊಂದಿಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕೆಂದು ಸ್ಪಷ್ಟಪಡಿಸಿದೆ.

ಒಂದು ವೇಳೆ ನಿಯಮಿತ ಪ್ರಾಧಿಕಾರಿಗೆ ಮೊದಲೇ ತಿಳಿಸದೆ ಆಸ್ತಿ ಖರೀದಿ ಅಥವಾ ಮಾರಾಟ ಮಾಡಿದ್ದರೆ 2 ತಿಂಗಳ ಒಳಗಾಗಿಯೂ ವರದಿ ಮಾಡದಿದ್ದಲ್ಲಿ ಅಂತಹ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಕೆಎಸ್​ಪಿ (ನಡತೆ) ನಿಯಮಗಳನ್ನು ಉಲ್ಲಂಘನೆ ಆರೋಪದಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಡಿಜಿಪಿ (ಆಡಳಿತ) ಸೌಮೇಂದು ಮುಖರ್ಜಿ ಹೊರಡಿಸಿರುವ ಆದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!