ಪೊಲೀಸ್ ಠಾಣೆಗೆ ದೂರು ಕೊಡಲು ಬಂದ ನಾಗರಿಕರೊಂದಿಗೆ ಸಂಯಮದಿಂದ ವರ್ತಿಸಿ ಪೊಲೀಸರಿಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರದಲ್ಲಿ ಹಾಡುಹಗಲೇ ಅತ್ತೆಯ ಸುಲಿಗೆ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಕಳವಳ ಪಡಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಾಗರಿಕರು ನೆಮ್ಮದಿಯಿಂದ ಬದುಕುವ ವಾತಾವರಣ ಕಲ್ಪಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ದೂರು ಕೊಡಲು ಬಂದ ನಾಗರಿಕರೊಂದಿಗೆ ಸಂಯಮ ದಿಂದ ವರ್ತಿಸುವಂತೆ ಸೂಚಿಸಿದರು
ಮುಖ್ಯಮಂತ್ರಿಯಾಗುವುದರ ಮೊದಲು ಗೃಹಖಾತೆಯ ನಿಭಾಯಿಸಿದ ರಿಂದ ಇಲಾಖೆಯಲ್ಲಿ ನಡೆಯುವ ಪ್ರತಿಯೊಂದು ವಿದ್ಯಮಾನಗಳು ಗೊತ್ತಿದೆ ಎಂದು ಹೇಳಿದವರು ನಾಗರಿಕರು ನೆಮ್ಮದಿಯಿಂದ ಬದುಕಲು ಪೊಲೀಸರ ಪಾತ್ರ ದೊಡ್ಡದಾಗಿದೆ ಕಾನೂನು-ಸುವ್ಯವಸ್ಥೆ ಕಾಪಾಡಿ ಯಾವುದೇ ಕಾರಣಕ್ಕೂ ಶಾಂತಿಗೆ ಭಂಗವಾಗದಂತೆ ಎಚ್ಚರ ವಹಿಸಬೇಕೆಂದು ಸೂಚಿಸಿದರು