ಪೊಲಿಟೆಕ್ನಿಕ್ : ಸಿವಿಲ್ ವಿಭಾಗದ 9 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ
ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದಿಂದ ಇತ್ತೀಚಿಗೆ ನಡೆದ ಪ್ರಿಸಮ್ ಆರ್ ಎಂ ಸಿ ಕಂಪನಿಯ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಸಿವಿಲ್ ವಿಭಾಗದ ಅಂತಿಮ ವರ್ಷದ 9 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಎಂದು ಡಿಪ್ಲೋಮ ಕಾಲೇಜಿನ ಪ್ರಾಂಶುಪಾಲರಾದ ಡಾ ಶ್ರೀಧರ್ ಬಿ. ಆರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರ್ಷಕ್ಕೆ 3.5 ಲಕ್ಷಗಳ ಶ್ಲಾಘನೀಯ ಪ್ಯಾಕೇಜ್ನೊಂದಿಗೆ ಈ ಡಿಪ್ಲೊಮಾ ವಿದ್ಯಾರ್ಥಿಗಳು ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದ್ದಾರೆ.
ಇನ್ನೂ ಹಲವು ಕಂಪನಿಗಳು ಸರದಿಯಲ್ಲಿದ್ದು, ಆರ್ಥಿಕ ಹಿಂಜರಿತದ ಸಮಯದಲ್ಲೂ ವಿದ್ಯಾರ್ಥಿಗಳಿಗೆ ಕಂಪನಿ ಅವಕಾಶಗಳು ಸಿಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಕಾಲೇಜಿನ ಆಡಳಿತ ಅಧಿಕಾರಿ ಶ್ರೀ ವೈಯೂ ಸುಭಾಷ್ ಚಂದ್ರ ತಿಳಿಸಿದ್ದಾರೆ.
ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೂ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂಬಿ, ಡಿಪ್ಲೋಮ ಸಿವಿಲ್ ವಿಭಾಗದ ಮುಖ್ಯಸ್ಥರಾದ ನಿಂಗರಾಜು ಸಿ, ವಿಭಾಗದ ಪ್ಲೇಸ್ಮೆಂಟ್ ಸಂಯೋಜಕರಾದ ಪ್ರೊ ಯಾಸ್ಮಿನ್ ಬೇಗಮ್, ವಿಭಾಗದ ಪ್ರಾಧ್ಯಾಪಕ ವರ್ಗದವರಾದ ಮಾರುತಿ ಕೆ. ಪಿ, ಗಂಗಮ್ಮ ಜಿ, ಸಿ ಮತ್ತು ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.