ಅಖಿಲ ಭಾರತ ವಕೀಲರ ಒಕ್ಕೂಟದ 9ನೇ ಕರ್ನಾಟಕ ರಾಜ್ಯ ಸಮ್ಮೇಳನದ ಪೋಸ್ಟರ್ ಬಿಡುಗಡೆ

ಅಖಿಲ ಭಾರತ ವಕೀಲರ ಒಕ್ಕೂಟದ ೯ನೇ ಕರ್ನಾಟಕ ರಾಜ್ಯ ಸಮ್ಮೇಳನದ ಪೋಸ್ಟರ್ ಬಿಡುಗಡೆ

ದಾವಣಗೆರೆ: ಮಾರ್ಚ್ 11 ಮತ್ತು 12ರಂದು ದಾರವಾಡದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಆಯೋಜಿಸಲಾಗಿರುವ ಅಖಿಲ ಭಾರತ ವಕೀಲರ ಒಕ್ಕೂಟದ ೯ನೇ ಕರ್ನಾಟಕ ರಾಜ್ಯ ಸಮ್ಮೇಳನದ ಪೋಸ್ಟರ್‌ರನ್ನು ದಾವಣಗೆರೆಯಲ್ಲಿ ಬಿಡುಗಡೆ ಮಾಡಲಾಯಿತು.

ಈ ವೇಳೆ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಹಿರಿಯ ನ್ಯಾಯಾವಾದಿ ರಾಮಚಂದ್ರ ಕಲಾಲ್, ಸಂವಿಧಾನದ ಆಶಯಗಳನ್ನು ಅರ್ಥಪೂರ್ಣವಾಗಿ ಕಾರ್ಯರೂಪಕ್ಕೆ ತರುವ ಮೂಲಕ ಸ್ವತಂತ್ರ ನ್ಯಾಯಾಂಗ ಮತ್ತು ಪ್ರಜಾಪ್ರಭುತ್ವ ರಕ್ಷಣೆ ಮಾಡಲು ಸಾಧ್ಯ ಎಂದು ತಿಳಿಸಿದರು.

ವೈವಿಧ್ಯತೆಯಲ್ಲಿ ಏಕತೆ ಹೊಂದಿರುವ ನಮ್ಮ ದೇಶವು ಬಹುತ್ವದ ಸಂಸ್ಕೃತಿ ಆಚಾರ ವಿಚಾರಗಳನ್ನು ಹೊಂದಿದ್ದು, ಸಂವಿಧಾನವು ಎಲ್ಲ ಜನರ ಸರ್ವತೋಮುಖ ಅಭಿವೃದ್ಧಿಯನ್ನು ಮತ್ತು ಹಕ್ಕುಗಳನ್ನು ಕಾಪಾಡುವಲ್ಲಿ ಯಶಸ್ವಿಯಾಗಿದೆ. ಉದಾತ್ತ ವಿಚಾರಗಳು ಯಾವುದೇ ಕಡೆಯಿಂದ ಬಂದರೂ ಮುಕ್ತ ಮನಸ್ಸಿನಿಂದ ನಾವು ಸ್ವಾಗತಿಸಬೇಕಿದೆ. ವಕೀಲರ ಹಿತರಕ್ಷಣೆಗಾಗಿ ಮತ್ತು ಸಂವಿಧಾನ ರಕ್ಷಣೆಗಾಗಿ ಅಖಿಲ ಭಾರತ ವಕೀಲರ ಒಕ್ಕೂಟದ ೯ನೇ ಕರ್ನಾಟಕ ರಾಜ್ಯ ಸಮ್ಮೇಳನದ ಯಶಸ್ವಿಗೆ ನಾವು ಶ್ರಮಿಸಬೇಕು ಎಂದು ಹೇಳಿದರು.

ಪ್ರಾಸ್ತವಿಕವಾಗಿ ಮಾತನಾಡಿದ ಹಿರಿಯ ನ್ಯಾಯಾವಾದಿ ಎಲ್.ಹೆಚ್.ಅರುಣ್‌ಕುಮಾರ್, ಸಂವಿಧಾನ ರಕ್ಷಿಸಿ, ಪ್ರಜಾಪ್ರಭುತ್ವ ಉಳಿಸಿ, ವಕೀಲರ ರಕ್ಷಣಾ ಕಾಯ್ದೆ ಜಾರಿಯಾಗಲಿ, ನ್ಯಾಯಾಂಗ ವ್ಯವಸ್ಥೆ ಅಸ್ಥಿರಗೊಳಿಸುವ ರಾಜಕೀಯ ಹುನ್ನಾರ ನಿಲ್ಲಲಿ ಎಂಬ ಘೋಷಣೆಗಳೋಂದಿಗೆ ವಕೀಲರ ಕರ್ನಾಟಕ ರಾಜ್ಯ ಸಮ್ಮೇಳನ ನಡೆಯುತ್ತಿದೆ ಎಂದು ತಿಳಿಸಿದರು.

ದೇಶದ ವಿವಿದೆಡೆ ವಕೀಲರ ಮೇಲೆ ನಿರಂತವಾಗಿ ನಡೆಯುತ್ತಿರುವ ದೌರ್ಜನ್ಯ, ಕಿರುಕುಳ, ಹಲ್ಲೆ ಕೊಲೆ ಮುಂತಾದ ಕೃತ್ಯ ತಡೆಗಟ್ಟಲು ಸರ್ಕಾರಗಳು ಶೀಘ್ರವಾಗಿ ವಕೀಲರ ರಕ್ಷಣಾ ಕಾಯ್ದೆ ರೂಪಿಸಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಸಮಾರಂಭದಲ್ಲಿ ಮಾತನಾಡಿದ ಹಿರಿಯ ವಕೀಲ ಅನಿಷ್‌ಪಾಷಾ ಮಾತನಾಡಿ, ವಕೀಲರು ಇಂದು ಹಲವಾರು ಸಮಸ್ಯೆ ಹಾಗೂ ಸವಾಲುಗಳನ್ನು ಎದುರಿಸುತ್ತಿದ್ದ ಈ ದಿಸೆಯಲ್ಲಿ ಅಖಿಲ ಭಾರತ ವಕೀಲರ ಒಕ್ಕೂಟ ವಕೀಲರ ಮಧ್ಯೆ ಕ್ರೀಯಾಶೀಲವಾಗಿ ಕಾರ್ಯ ಚಟುವಟಿಕೆಗಳನ್ನು ನಿರ್ವಹಿಸಲು ಕಂಕಣಬದ್ದವಾಗಿದೆ ಎಂದರು.

ಸಮಾರಂಭದಲ್ಲಿ ವಕೀಲರಾದ ಉಷಾ ಕೈಲಾಸದ್, ಹೆಚ್.ಎಂ.ನಾಯ್ಕ, ನಾಗರಾಜ್ ಎನ್.ಬಿ, ಕೆ.ಹೆಚ್.ರುದ್ರೇಶ್, ಬಿ.ತಿರುಕಪ್ಪ, ಮಧು ಹೊರಹಟ್ಟಿ, ಗರ್‌ಶಾಮ್ ಮಾರ್ಕ್ ಇತರರು ಇದ್ದರು.

Leave a Reply

Your email address will not be published. Required fields are marked *

error: Content is protected !!