Pourakarmika; ಪೌರ ಕಾರ್ಮಿಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟ
ದಾವಣಗೆರೆ, ಸೆ.01: ಜಗಳೂರು ಪಟ್ಟಣ ಪಂಚಾಯತಿಗಳಲ್ಲಿ ನೇರ ಪಾವತಿ, ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು (pourakarmika) ಖಾಲಿ ಇರುವ ಪೌರ ಕಾರ್ಮಿಕರ ಹುದ್ದೆಗಳಿಗೆ (job) ವಿಶೇಷ ನೇಮಕಾತಿಯಡಿ ಅರ್ಜಿ ಆಹ್ವಾನಿಸಿ, ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ (Provisional list) ಪ್ರಕಟಿಸಲಾಗಿದೆ.
ಅರ್ಜಿ ಸಲ್ಲಿಸಿದ ಪೌರಕಾರ್ಮಿಕರು ಸಿದ್ಧಪಡಿಸಿದ ತಾತ್ಕಾಲಿಕ ಪಟ್ಟಿಯನ್ನು ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಾರ್ಯಾಲಯದ ಅಧಿಕೃತ ವೆಬ್ ಸೈಟ್ http://davanageredudc.mrc.gov.in ಜಿಲ್ಲಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ನಗರಾಭಿವೃದ್ಧಿ ಕೋಶ, ಜಗಳೂರು ಪಟ್ಟಣ ಪಂಚಾಯತಿಯ ಸೂಚನಾ ಫಲಕ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕೃತ ವೆಬ್ ಸೈಟ್ ಗಳಲ್ಲಿ ವೀಕ್ಷಿಸಬಹುದು. ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆ ಹೊರಡಿಸಿದ 15 ದಿನಗಳೊಳಗಾಗಿ ಮುಖ್ಯಾಧಿಕಾರಿ, ಪಟ್ಟಣ ಪಂಚಾಯಿತಿ, ಜಗಳೂರು ಅಥವಾ ಈ ಕಛೇರಿಗೆ ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಬೇಕು.
kabaddi; ಒಂದು ಜಿಲ್ಲೆ ಒಂದು ಕ್ರೀಡೆ ಯೋಜನೆಯಡಿ ಕಬಡ್ಡಿಗೆ ಪ್ರಾಧಾನ್ಯತೆ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಾರ್ಯಾಲಯದ ಅಧಿಕೃತ ವೆಬ್ ಸೈಟ್ http://davanageredudc.mrc.gov.in ಸಂಪರ್ಕಿಸಲು ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.