farmers; ರೈತರಿಗೆ ವಿದ್ಯುತ್ ಕಡಿತ, ರಾಜ್ಯ ಹೆದ್ದಾರಿ ತಡೆ; ಸರ್ಕಾರದ ವಿರುದ್ಧ ಅಕ್ರೋಶ
ದಾವಣಗೆರೆ, ಅ.12: ರೈತರಿಗೆ (farmers) ಕೇವಲ ಮೂರು ಗಂಟೆಗಳ ಕಾಲ ವಿದ್ಯುತ್ ನೀಡುತ್ತಿರುವುದನ್ನು ವಿರೋಧಿಸಿ ರೈತರು ಕುರುಬರಹಳ್ಳಿ ಸಮೀಪ ರಾಜ್ಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸುವ ಮೂಲಕ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.
ಹರಿಹರ ತಾಲೂಕಿನ ಕುರುಬರಹಳ್ಳಿ ಸಮೀಪದಲ್ಲಿ ರಾಜ್ಯ ಹೆದ್ದಾರಿಯನ್ನು ತಡೆದ ರೈತರು ತಮ್ಮ ಬೇಡಿಕೆ ಈಡೇರುವವರೆಗೂ ರಸ್ತೆಯನ್ನ ಯಾವುದೇ ಕಾರಣಕ್ಕೂ ತೆರವು ಮಾಡುವುದಿಲ್ಲ ಬೆಸ್ಕಾಂ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ರೈತರಿಗೆ ಸಮರ್ಪಕ ವಿದ್ಯುತ್ ಸರಬರಾಜು ನೀಡುವ ಭರವಸೆ ನೀಡುವವರೆಗೂ ಈ ಹೋರಾಟ ಮುಂದುವರೆಯುತ್ತದೆ ಎಂದು ಎಚ್ಚರಿಕೆ ನೀಡಿದರು.
Child labour; ಬಾಲ ಕಾರ್ಮಿಕ ಪದ್ಧತಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಂತೋಷ್ ಲಾಡ್ ಎಚ್ಚರಿಕೆ
ಈ ವೇಳೆ ಮಾತನಾಡಿದ ಮುಖಂಡರು ಕಳೆದ ಒಂದು ತಿಂಗಳಿಂದ ಬೆಸ್ಕಾಂ ಇಲಾಖೆ ರೈತರ ಜೀವನದಲ್ಲಿ ಆಟವಾಡುತ್ತಿದೆ ಈ ವರ್ಷ ಮಳೆಯ ಪ್ರಮಾಣ ಕಡಿಮೆಯಾಗಿದ್ದು ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆಗಳು ನಾಶವಾಗಿದೆ ಇದರಿಂದ ಕಂಗಾಳದ ರೈತರು ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಮುಂದಾಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿಯೂ ಸಹ ಸರ್ಕಾರ ರೈತರಿಗೆ ನೀಡುವ ವಿದ್ಯುತ್ ಪ್ರಮಾಣವನ್ನ ದಿನದಿಂದ ದಿನಕ್ಕೆ ಕಡಿಮೆ ಮಾಡುತ್ತಿರುವುದನ್ನು ನೋಡಿದರೆ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಸರ್ಕಾರವಾಗಿ ಆಡಳಿತ ನಡೆಸುತ್ತಿದೆ.