ವಿಧಾನಸಭಾ ಚುನಾವಣೆಗೆ ಎಐಸಿಸಿ ವೀಕ್ಷಕರಾಗಿ ಪ್ರಣಿತಿ ಸುಶೀಲ್ ಕುಮಾರ್ ಸಿಂಧೆ ನೇಮಕ
ದಾವಣಗೆರೆ: 2023ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗಳ ಕಾಂಗ್ರೆಸ್ ವೀಕ್ಷಕರಾಗಿ ಪ್ರಣಿತಿ ಸುಶೀಲ್ ಕುಮಾರ್ ಶಿಂಧೆ ಅವರನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ರವರು ನೇಮಕಮಾಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ತಿಳಿಸಿದ್ದಾರೆ.
ಎಐಸಿಸಿ ವೀಕ್ಷಕರು ಟಿಕೆಟ್ ಹಂಚಿಕೆಯಿಂದ ಹಿಡಿದು ಚುನಾವಣೆ ಗೆಲ್ಲುವವರೆಗೂ ಎಲ್ಲಾ ಪ್ರಕ್ರಿಯೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ. ಎಐಸಿಸಿ ನೂತನ ವೀಕ್ಷಕರಾದ ಪ್ರಣತಿ ಸುಶೀಲ್ ಕುಮಾರ್ ಶಿಂದೆರವರು ಮಹಾರಾಷ್ಟ್ರ ವಿಧಾನಸಭೆಗೆ ಮೂರು ಬಾರಿ ಆಯ್ಕೆಯಾಗಿದ್ದು, ಮಾಜಿ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರ ಪುತ್ರಿಯಾಗಿದ್ದಾರೆ.