ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭ, ವಲೆರಬಲ್, ಕ್ರಿಟಿಕಲ್ ಮತಗಟ್ಟೆಗಳ ಸಮೀಕ್ಷೆ
ದಾವಣಗೆರೆ: 2024 ರ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಯುತ್ತಿದ್ದು ಜಿಲ್ಲೆಯಲ್ಲಿ ಮುಕ್ತ ಹಾಗೂ ಶಾಂತಯುತ ಚುನಾವಣೆ ನಡೆಸಲು ವಲ್ನರಬಲ್, ಕ್ರಿಟಿಕಲ್ ಮತಗಟ್ಟೆಗಳ ಸಮೀಕ್ಷೆ ಕೈಗೊಂಡು ಸುವ್ಯವಸ್ಥಿತವಾದ ಚುನಾವಣೆ ನಡೆಸಲು ಅಧಿಕಾರಿಗಳು ಸಿದ್ದರಾಗಬೇಕೆಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ఎం.వి. ಜಿಲ್ಲಾಧಿಕಾರಿಗಳ ಮುಂಬರುವ ಸಾರ್ವತ್ರಿಕ ತಿಳಿಸಿದರು.
ಕಚೇರಿಯಲ್ಲಿ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮುಕ್ತ, ಶಾಂತಯುತ ಚುನಾವಣೆ ನಡೆಸಲು ಪ್ರತಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಕೈಗೊಂಡ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ದಾವಣಗೆರೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಮತ್ತು ವಿಜಯನಗರ ಜಿಲ್ಲೆಯ ಹರಪನಹಳ್ಳಿ ವಿಧಾನಸಭಾ ಕ್ಷೇತ್ರ ಸೇರಲಿದೆ. ಈ ಹಿಂದೆ ನಡೆದ ಚುನಾವಣಾ ಸಂದರ್ಭದಲ್ಲಿ ನಡೆದ ಗುಂಪು ಘರ್ಷಣೆ ಮತ್ತು ಪೊಲೀಸ್ ಠಾಣೆಯಲ್ಲಿ ಪ್ರಕರಣಗಳನ್ನು ಸಾರ್ವಜನಿಕರು ದಾಖಲಾದ ಆಧರಿಸಿ ಮುಕ್ತವಾಗಿ ಮತದಾನ ಮಾಡಲು ಬೇಕಾದ ವಾತಾವರಣ ಕಲ್ಪಿಸಲು ದುರ್ಬಲ ಪ್ರದೇಶಗಳನ್ನು ಗುರುತಿಸಿ ಇದರ ವ್ಯಾಪ್ತಿಯಲ್ಲಿ ಬರುವ ಮತಗಟ್ಟೆಗಳನ್ನು ಕ್ರಿಟಿಕಲ್ ಮತಗಟ್ಟೆಗಳೆಂದು ಗುರುತಿಸಿ ಇಲ್ಲಿ ಶಾಂತಯುತವಾದ ಮತದಾನಕ್ಕೆ ಅಗತ್ಯವಿರುವ ಎಲ್ಲಾ ಕ್ರಮ ಕೈಗೊಳ್ಳಲಾಗುತ್ತದೆ.
ಈ ಬಗ್ಗೆ ಅಧಿಕಾರಿಗಳು ಕೂಲಂಕುಷವಾಗಿ ಪರಿಶೀಲಿಸಿ ವರದಿ ನೀಡಲು ಎಲ್ಲಾ ತಹಶೀಲ್ದಾರರಿಗೆ ಸೂಚನೆ ನೀಡಿದರು.ಎಲ್ಲಾ ತಹಶೀಲ್ದಾರರು ಮತಗಟ್ಟೆಗಳನ್ನು ಪರಿಶೀಲನೆ ನಡೆಸಿ ಮುಕ್ತ, ನ್ಯಾಯ ಸಮ್ಮತ, ಶಾಂತಯುತ ಚುನಾವಣೆ ನಡೆಸಲು ಬೇಕಾದ ఎల్లా ಸಿದ್ಧತೆಗಳ ಕುರಿತಂತೆ ತಕ್ಷಣವೇ ವರದಿ ನೀಡಲು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಸುರೇಶ್ ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಉಪಸ್ಥಿತರಿದ್ದರು.