ದಾವಣಗೆರೆ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಚುನಾವಣೆಗೆ ಸಕಲ ಸಿದ್ದತೆ
ದಾವಣಗೆರೆ: ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ದಾವಣಗೆರೆ ಜಿಲ್ಲಾ ಘಟಕದ ಚುನಾವಣೆಯ ಮತದಾನ ಪ್ರಕ್ರಿಯೆ ನಾಳೆ 27-02-2022 ರಂದು ನಡೆಯಲಿದೆ.
ದಾವಣಗೆರೆ ನಗರದ ವಾರ್ತಾ ಭವನದಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮತದಾನ ನಡೆಯಲಿದೆ, ಇದಕ್ಕಾಗಿ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ, ಜಿಲ್ಲಾ ಘಟಕ ಹಾಗೂ ರಾಜ್ಯ ಉಪಾಧ್ಯಕ್ಷ ಸ್ಥಾನದ ಮತದಾನಕ್ಕೆ ಎರಡು ಮತ ಪೆಟ್ಟಿಗೆ ಇರಿಸಲಾಗಿದೆ. ಮತದಾನ ಪ್ರಕ್ರಿಯೆ ಮುಗಿದ ಬಳಿಕ ಮತ ಎಣಿಕೆ ಶುರುವಾಗಲಿದೆ.
ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಉಪಾಧ್ಯಕ್ಷ, ಕಾರ್ಯದರ್ಶಿ, ಖಜಾಂಚಿ, ಹಾಗೂ 15 ಕಾರ್ಯಕಾರಿ ಸಮಿತಿ ಸದಸ್ಯತ್ವ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು ಸ್ಪರ್ಧಿಸಿದ್ದರೆ. ಉಪಾಧ್ಯಕ್ಷ ಸ್ಥಾನಕ್ಕೆ ನಾಲ್ಕು, ಕಾರ್ಯದರ್ಶಿ ಸ್ಥಾನಕ್ಕೆ ಐದು, ಖಜಾಂಚಿ ಸ್ಥಾನಕ್ಕೆ ಎರಡು, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯಕ್ಕೆ ಇಬ್ಬರು ಹಾಗೂ ಕಾರ್ಯಕಾರಣಿ ಸಮಿತಿಗೆ 25 ಜನ ಸ್ಪರ್ಧೆ ಮಾಡಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ 250 ಕ್ಕೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.