ಪತ್ರಿಕಾ ದಿನಾಚರಣೆ – ಪತ್ರಕರ್ತರಿಗೆ ಕಾರ್ಯಗಾರ

ಪತ್ರಿಕಾ ದಿನಾಚರಣೆ - ಪತ್ರಕರ್ತರಿಗೆ ಕಾರ್ಯಗಾರ

ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲಾ ಘಟಕ ಮತ್ತು ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಪತ್ರಕರ್ತರಿಗೆ ಕಾರ್ಯಗಾರವನ್ನು ದಿನಾಂಕ 05-08-2023ರ ಶನಿವಾರ ಬೆಳಿಗ್ಗೆ 10-30 ಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯದ ಶಿವಗಂಗೋತ್ರಿ ಯ ಎಂಬಿಎ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಇ. ಎಂ. ಮಂಜುನಾಥ್ ತಿಳಿಸಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಕೊಪ್ಪಳ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ|| ಬಿ.ಕೆ ರವಿ ನೆರವೇರಿಸಲಿದ್ದು. ಅಧ್ಯಕ್ಷತೆಯನ್ನು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ|| ಬಿ. ಟಿ. ಕುಂಬಾರ ವಹಿಸಲಿದ್ದಾರೆ. ಡಿಜಿಟಲ್ ಯುಗದಲ್ಲಿ ಪತ್ರಕರ್ತರ ಭವಿಷ್ಯ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸವನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ .ವಿ. ಪ್ರಭಾಕರ್ ನೀಡಲಿದ್ದಾರೆ.

ಪತ್ರಿಕಾ ದಿನಾಚರಣೆ - ಪತ್ರಕರ್ತರಿಗೆ ಕಾರ್ಯಗಾರ

ಗ್ರಾಮೀಣ ಪತ್ರಕರ್ತರ ಸಮಸ್ಯೆಗಳು ಮತ್ತು ಪರಿಹಾರ ಮಾರ್ಗಗಳು ಎಂಬ ವಿಷಯದ ಬಗ್ಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್ ಆಗಮಿಸಲಿದ್ದಾರೆ ಎಂದು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎ. ಫಕೃದ್ದೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕುಲಸಚಿವರಾದ ಶ್ರೀಮತಿ ಸರೋಜಾ ಬಿ. ಬಿ, ಡಾ. ಶಿವಶಂಕರ್. ಕೆ, ಹಣಕಾಸು ಅಧಿಕಾರಿ ಪ್ರೊ|| ಶಶಿಧರ್ ಆರ್ , ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಾವಣಗೆರೆ ಜಿಲ್ಲಾಧ್ಯಕ್ಷ ಇ. ಎಂ.ಮಂಜುನಾಥ್ , ಚಿತ್ರದುರ್ಗ ಜಿಲ್ಲಾಧ್ಯಕ್ಷ, ಬಿ .ದಿನೇಶ್ ಗೌಡಗೆರೆ , ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಕೆ. ಏಕಾಂತಪ್ಪ, ಪತ್ರಕರ್ತರ ಸಂಘದ ದಾವಣಗೆರೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ. ಫಕೃದ್ದೀನ್, ಚಿತ್ರದುರ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್. ಸಿದ್ದರಾಜು, ವರದಿಗಾರರ ಕೂಟದ ಪ್ರಧಾನ ಕಾರ್ಯದರ್ಶಿ ಡಾ. ವರದರಾಜ್, ಉಪಸ್ಥಿತರಿರುವರು ಎಂದು ಜಿಲ್ಲಾ ಖಜಾಂಚಿ ಎನ್. ವಿ.ಬದರಿನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಾಗಾರದಲ್ಲಿ ಭಾಗವಹಿಸಲು ಇಚ್ಚಿಸುವ ಪತ್ರಕರ್ತರು ಹೆಚ್ಚಿನ ಮಾಹಿತಿಗಾಗಿ 8660305128, 8494949909, 8618063304, 9844377451, 9945549009 ಸಂಪರ್ಕಿಸಲು ಕೋರಲಾಗಿದೆ.

Leave a Reply

Your email address will not be published. Required fields are marked *

error: Content is protected !!