ಡೆಂಗ್ಯೂ ಚಿಕನ್ ಗುನ್ಯಾ ತಡೆಗೆ ಮುಂದಾಗಿ : ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ಡೆಂಗ್ಯೂ ಚಿಕನ್ ಗುನ್ಯಾ ತಡೆಗೆ ಮುಂದಾಗಿ : ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ದಾವಣಗೆರೆ: ಜಿಲ್ಲೆಯಲ್ಲಿ ಡೆಂಗ್ಯೂ ಮತ್ತು ಚಿಕನ್‍ಗುನ್ಯಾ ರೋಗಗಳ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು.

ಮಂಗಳವಾರ  ಜಿಲ್ಲಾಡಳಿತ ಭವನದ  ಜಿಲ್ಲಾಧಿಕಾರಿಳಿತ ಭವನದ ಸಭಾಂಗಣದಲ್ಲಿ ಜರುಗಿದ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಉದ್ದೇಶಿಸಿ ಅವರು ಮಾತನಾಡಿzರು ಡೆಂಗ್ಯೂ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ಹಾಗೂ ಮುಂಜಾಗ್ರತಾ ಕ್ರಮಗಳ ಅನುಷ್ಠಾ ನದಲ್ಲಿ  ಸಮುದಾಯದ ಪಾತ್ರ ಮುಖ್ಯವಾಗಿರುತ್ತದೆ. ಈ ವರ್ಷದ ಧ್ಯೇಯ ವಾಕ್ಯದಂತೆ ಸಾರ್ವಜನಿಕರೊಂದಿಗೆ ನಿಕಟ ಸಂಪರ್ಕವಿರುವ ಸರ್ಕಾರದ ಇತರ ಇಲಾಖೆಗಳು, ಸ್ಥಳೀಯ ಸಂಸ್ಥೆಗಳು, ಸರ್ಕಾರೇತರ ಸಂಘ ಸಂಸ್ಥೆಗಳು, ಸ್ವಯಂ ಸೇವಾ ಸಂಘಗಳು, ಸ್ಥಳೀಯ ಪ್ರಮುಖ ವ್ಯಕ್ತಿಗಳು ಹಾಗೂ ಧಾರ್ಮಿಕ ಮುಖಂಡರ ಸಹಭಾಗಿತ್ವದಲ್ಲಿ ಮಳೆಗಾಲ ಹಾಗೂ ನಂತರದ ದಿನಗಳಲ್ಲಿ ಡೆಂಗ್ಯೂ ನಿಯಂತ್ರಣ ಕ್ರಮಗಳನ್ನು ಸಮುದಾಯದ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಮೂಲಕ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಬೇಕಾಗುತ್ತದೆ ಎಂದರು.

ಜಿಲ್ಲೆಯಲ್ಲಿ ವರದಿಯಾಗುವ ಎಲ್ಲಾ ಜ್ವರ ಪ್ರಕರಣಗಳಿಗೆ ರಕ್ತಲೇಪನ ಸಂಗ್ರಹಿಸುವುದು. ಶಂಕಿತ ಡೆಂಗ್ಯೂ, ಚಿಕನ್‍ಗುನ್ಯಾ ಪ್ರಕರಣಗಳಿಗೆ ರಕ್ತಮಾದರಿ ಸಂಗ್ರಹಿಸಿ ಪ್ರಯೋಗಾಲಯಗಳಿಗೆ ತಲುಪಿಸಬೇಕು. ಲಾರ್ವಾ ಸಮೀಕ್ಷೆ ಕಾರ್ಯವನ್ನು ವೈದ್ಯಾಧಿಕಾರಿಗಳು ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು ಮೇಲ್ವಿಚಾರಣೆ ನಡೆಸಿ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ, ಈ ರೋಗಗಳ ಬಗ್ಗೆ ಅರಿವು ಮೂಡಿಸಬೇಕು. ಸಾಂಕ್ರಾಮಿಕ ರೋಗಗಳ ಬಗ್ಗೆ ಕಾಲ ಕಾಲಕ್ಕೆ ನೀಡುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಮೊದಲು ಸೂಕ್ತವಾದ ಪ್ರಮಾಣದಲ್ಲಿ ಕ್ಲೋರಿನೇಶನ್ ಮಾಡಬೇಕು. ಗುಂಡಿಗಳು ಹಾಗೂ ತಗ್ಗುಗಳನ್ನು ಮುಚ್ಚಿಸುವುದರ ಮೂಲಕ ನೀರು ಸಂಗ್ರಹವಾಗದಂತೆ ತಡೆಗಟ್ಟಬೇಕು. ಸೊಳ್ಳೆ ಉತ್ಪತ್ತಿ ತಾಣಗಳ ನಿವಾರಣೆ ಹಾಗೂ ಗ್ರಾಮ ನೈರ್ಮಲ್ಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಸೊಳ್ಳೆ ಉತ್ಪತ್ತಿ ತಾಣಗಳನ್ನು ನಿಯಂತ್ರಿಸಬೇಕು, ಸಾರ್ವಜನಿಕ ನಲ್ಲಿಗಳು ಹಾಗೂ ಕೊಳವೆ ಬಾವಿಗಳಿಂದ ನೀರು ಸೋರಿಕೆಯಾಗದಂತೆ ಸರಬರಾಜು ಮಾಡಲು ಕ್ರಮ ಕೈಗೊಳ್ಳುವುದು.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾರಿ ಸುರೇಶ್ ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ವಿವಿಧ ಇಲಾಖೆಯ ಅಧಿಕಾರಿ ಹಾಗೂ ಉಪಸ್ಥಿತಿರಿರುವರು.

Leave a Reply

Your email address will not be published. Required fields are marked *

error: Content is protected !!