ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಜೆಡಿಎಸ್ ಪ್ರತಿಭಟನೆ
ದಾವಣಗೆರೆ: ಅಗತ್ಯ ವಸ್ತುಗಳು ಹಾಗೂ ಪೆಟ್ರೋಲ್ ಡಿಸೇಲ್ ಬೆಲೆ, ಅಡುಗೆ ಅನಿಲ ಹಾಗೂ ರಸಗೊಬ್ಬರ ಬೆಲೆ ಹೆಚ್ಚಳ ಖಂಡಿಸಿ ಜೆಡಿಎಸ್ ಪ್ರತಿಭಟನೆ ನಡವಸಿತು. ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಬಳಿಕ ಕೆಇಬಿ ವೃತ್ತದಲ್ಲಿನ ಪೆಟ್ರೋಲ್ ಬಂಕ್ ಮುಂದೆ ಕೂಡ ಪ್ರತಿಭಟನೆ ಮಾಡಿದರು ಇದೇವೇಳೆ ಗ್ರಾಹಕರಿಗೆ ಸಿಹಿ ಹಂಚುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಿನೂತನವಾಗಿ ವಿರೋಧ ವ್ಯಕ್ತಪಡಿಸಿದರು. ಇದೇವೇಳೆ ಮಾತನಾಡಿದ ಶ್ರೀಧರ್ ಪಾಟೀಲ್ ಪ್ರಧಾನಿ ನರೇಂದ್ರ ಮೋದಿಯವರು ಆಡಳಿತಕ್ಕೆ ಬರುವ ಮುನ್ನ ಕೊಟ್ಟ ಭರವಸೆಗಳನ್ನ ಈಡೇರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದಲೂ ಬೆಲೆ ಏರಿಕೆ ನಿರಂತರವಾಗಿದೆ. ಅಡುಗೆ ಅನಿಲ, ಅಡುಗೆ ಎಣ್ಣೆ, ಪೆಟ್ರೋಲ್ ಹಾಗೂ ಡಿಸೇಲ್ ಮತ್ತು ರಸಗೊಬ್ಬರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ ಜನ ಸಾಮಾನ್ಯರು ಹಾಗೂ ರೈತರು ಬದುಕುವುದೇ ಕಷ್ಟವಾಗಿದೆ ಇದಕ್ಕೆಲ್ಲಾ ಕಾರಣ ಬಿಜೆಪಿ ಸರ್ಕಾರ ಮತ್ತು ನರೇಂದ್ರ ಮೋದಿಯವರ ಆಡಳಿತ ವೈಫಲ್ಯವೇ ಕಾರಣ ಎಂದರು. ಇನ್ನೂ ಪೆಟ್ರೋಲ್ ಬೆಲೆ 100 ರೂಪಾಯಿ ಗಡಿ ದಾಟಿದ್ದು ವಾಹನ ಸವಾರರಿಗೆ ಹೊರೆಯಾಗುತ್ತಿದೆ. ಒಬ್ಬ ಕಾರ್ಮಿಕ ತಿಂಗಳಿಗೆ 6 ರಿಂದ 7 ಸಾವಿರ ದುಡಿದರೆ ಪೆಟ್ರೋಲ್ ಗೆ 3 ಸಾವಿರ ಖರ್ಚು ಮಾಡಬೇಕಾಗುತ್ತದೆ. ಉಳಿದ ಅಲ್ಪ ಸ್ವಲ್ಪ ಹಣದಲ್ಲಿ ಕುಟುಂಬ ನಿರ್ವಹಣ ಮಕ್ಕಳ ವಿದ್ಯಾಭ್ಯಾಸ ಹೇಗೆ ಸಾಧ್ಯ ಬಿಜೆಪಿ ಸರ್ಕಾರದಿಂದ ಬಡವರು ಬದುಕುವುದೇ ಕಷ್ಟವಾಗಿದೆ ಎಂದರು. ಈ ಸಂದರ್ಭದಲ್ಲಿ ಕೆಟಿಜೆ ನಗರದ ಮಂಜಣ್ಣ, ವೆಂಕಟೇಶ್ ಸೇರಿದಂತೆ ಗ್ರಾಮಾಂತರ ಪ್ರದೇಶದ ಜೆಡಿಎಸ್ ಮುಖಂಡರು ಹಾಗೂ ಯುವ ಕಾರ್ಯಕರ್ತರು ಉಪಸ್ಥಿತರಿದ್ದರು.