ಶ್ರೀರಾಮನವಮಿಗೆ ಪ್ರಧಾನಿ, ಷಾ, ಬೊಮ್ಮಾಯಿ, ಸಿದ್ದರಾಮಯ್ಯ ಶುಭಾಶಯ
ನವದೆಹಲಿ: ಗುರುವಾರ ಸಂಭ್ರಮದಿಂದ ಆಚರಿಸಲಾಗುತ್ತಿರುವ ಶ್ರೀರಾಮನವಮಿ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.
‘ಎಲ್ಲರಿಗೂ ರಾಮನವಮಿಯ ಹಬ್ಬದ ಹಾರ್ದಿಕ ಶುಭಾಶಯಗಳು. ಭಗವಾನ್ ಶ್ರೀರಾಮನ ಜೀವನವು ತ್ಯಾಗ, ಸಂಯಮ ಮತ್ತು ಸಂಕಲ್ಪವನ್ನು ಆಧರಿಸಿದೆ. ಪ್ರತಿ ಯುಗದಲ್ಲೂ ಮಾನವೀಯತೆಗೆ ಸ್ಫೂರ್ತಿಯಾಗಿ ಉಳಿಯುತ್ತದೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಅಮಿತ್ ಶಾ ಶುಭಾಶಯ:
‘ಎಲ್ಲರಿಗೂ ರಾಮನವಮಿಯ ಹಬ್ಬದ ಹಾರ್ದಿಕ ಶುಭಾಶಯಗಳು. ಪುರುಷೋತ್ತಮ ಪ್ರಭು ಶ್ರೀರಾಮ, ಧರ್ಮ ಮತ್ತು ಸತ್ಯದ ಹಾದಿಯಲ್ಲಿ ನಡೆಯುವುದರೊಂದಿಗೆ ಇಡೀ ಮಾನವ ಜಗತ್ತಿಗೆ ಸಂದಿಗ್ಧ ಪರಿಸ್ಥಿತಿಗಳಲ್ಲಿ ಸಹ ತಾಳ್ಮೆ ಮತ್ತು ದಯೆಯ ಭಾವನೆಯನ್ನು ಹೊಂದಿರಲು ಕಲಿಸಿದ್ದಾರೆ. ಶ್ರೀರಾಮ ಎಲ್ಲರಿಗೂ ಆಶೀರ್ವಾದ ನೀಡಲಿ ಜೈ ಶ್ರೀ ರಾಮ್!’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಬೊಮ್ಮಾಯಿ ಶುಭ ಹಾರೈಕೆ:
ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ.
ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ.
ನಿನ್ನಿಷ್ಟದಂತೆನ್ನ ಇಟ್ಟಿರುವೆ ರಾಮ.
ನನ್ನಿಷ್ಟದಂತೆಲ್ಲ ಕೊಟ್ಟಿರುವೆ ರಾಮ..
ನಾಡಿನ ಸಮಸ್ತ ಜನತೆಗೆ ಶ್ರೀ ಮರ್ಯಾದಾ ಪುರುಷೋತ್ತಮ, ಶ್ರೀ ರಾಮನವಮಿಯ ಹಾರ್ದಿಕ ಶುಭಾಶಯಗಳು. ಪ್ರಭು ರಾಮಚಂದ್ರ ಸರ್ವರ ಬಾಳಿನಲ್ಲಿ ಒಳಿತನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಸಿದ್ದರಾಮಯ್ಯ ಟ್ವೀಟ್ :
ಆದರ್ಶ ಪುರುಷ ಶ್ರೀರಾಮನು ಹಾಕಿಕೊಟ್ಟ ಪ್ರೀತಿ, ಸಹಾನುಭೂತಿ, ಅಂತಃಕರಣ, ನ್ಯಾಯಪರಿಪಾಲನೆಯ ಹಾದಿಯಲ್ಲಿ ಮುನ್ನಡೆಯೋಣ. ಪಾನಕ, ಕೋಸಂಬರಿಯ ಜೊತೆ ಸ್ನೇಹ, ಸೌಹಾರ್ದತೆ ಮಿಳಿತಗೊಳ್ಳಲಿ, ಮನುಷ್ಯಪ್ರೇಮದ ಬೆಳಕು ಜಗದಗಲ ಬೆಳಗಲಿ. ನಾಡಿನ ಸಮಸ್ತ ಜನತೆಗೆ ರಾಮನವಮಿಯ ಶುಭಹಾರೈಕೆಗಳು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.