ಚನ್ನಗಿರಿ ಇಂದಿರಾಗಾಂಧಿ ವಸತಿ ಶಾಲೆಯ ಪ್ರಿನ್ಸಿಪಲ್ ಸೇರಿ 46 ವಿದ್ಯಾರ್ಥಿಗಳಿಗೆ ಕೊವಿಡ್ ಸೋಂಕು
ಚನ್ನಗಿರಿ: ದಾವಣಗೆರೆ ಜಿಲ್ಲೆಯಲ್ಲಿ ಮತ್ತೆ ಕರೋನಾತಂಕ ಮಾಡಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.
ಚನ್ನಗಿರಿ ತಾಲೂಕಿನಲ್ಲಿರುವ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಸೋಮವಾರ 32 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಮಂಗಳವಾರ ಇಂದು ಕೂಡ ಮತ್ತೆ ಪ್ರಾಂಶುಪಾಲರು ಸೇರಿ 14 ಮಕ್ಕಳಿಗೆ ವೈರಸ್ ದೃಢಪಡುವ ಮುಖೇನ ಸೋಂಕಿತರ ಸಂಖ್ಯೆ 46 ಕ್ಕೆ ಏರಿದ್ದು, ಪೊಷಕರಲ್ಲಿ ಸಹಜವಾಗಿ ಆತಂಕ ಹೆಚ್ಚಾಗುವಂತೆ ಮಾಡಿದೆ.
ಶಾಲೆಯ 47 ವಿದ್ಯಾರ್ಥಿಗಳಿಗೆ ಸ್ವಾಬ್ ಟೆಸ್ಟ್ ಮಾಡಿಸಿದಾಗ 14 ಮಕ್ಕಳಿಗೆ ವೈರಸ್ ದೃಢವಾಗಿದೆ. ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಒಟ್ಟು 246 ಮಕ್ಕಳಲ್ಲಿ 46 ಮಕ್ಕಳಿಗೆ ಸೋಂಕು ದೃಢಪಟ್ಟಿದ್ದು ಪೋಷಕರಲ್ಲಿ ಸಹಜವಾಗಿ ಆತಂಕ ಹೆಚ್ಚಿಸಿದೆ.