ಇಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಿಯಾಂಕಾ ಗಾಂಧಿ

ಬೆಂಗಳೂರು: ಇಂದು ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ ಆಗಮಿಸಿತ್ತಿದ್ದು, ಅರಮನೆ ಮೈದಾನದಲ್ಲಿ ನಡೆಯಲಿರುವ ನಾ ನಾಯಕಿ ಎಂಬ ಮಹಿಳಾ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಳೂರಿಗೆ ಆಗಮಿಸುತ್ತಿದ್ದು, ರಸ್ತೆಗಳಲ್ಲಿ ಪ್ರಿಯಾಂಕಾ ಗಾಂಧಿ ಅವರ ಬೃಹತ್ ಕಟೌಟ್​ಗಳು ರಾರಾಜಿಸುತ್ತಿವೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರಕ್ಕೆ ಮುಂದಾಗಿವೆ. ಇಂದಿನಿಂದ 2 ದಿನಗಳ ಕಾಲ ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿ ಸಭೆ ಹಿನ್ನೆಲೆ ಮಧ್ಯಾಹ್ನ ನವದೆಹಲಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಯಾಣ ಬೆಳೆಸಲಿದ್ದಾರೆ. ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗಿಯಾಗಿ ಬಳಿಕ ಕೇಂದ್ರದ ವಿವಿಧ ಸಚಿವರನ್ನು ಭೇಟಿ ಮಾಡಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಕೆಂಪೇಗೌಡ ಏರ್​​ಪೋರ್ಟ್​​ಗೆ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದು ಮಧ್ಯಾಹ್ನ 1.30ಕ್ಕೆ ಸಮಾವೇಶದ ವೇದಿಕೆಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 3.30ರವರೆಗೂ ಸಮಾವೇಶದಲ್ಲಿ ಇರಲಿದ್ದಾರೆ. ವೇದಿಕೆ ಮೇಲೆ ಕೇವಲ ಮಹಿಳಾ ನಾಯಕಿಯರಿಗೆ ಮಾತ್ರ ಅವಕಾಶ ನೀಡಲಾಗಿದ್ದು ಕಾಂಗ್ರೆಸ್​ನ ‘ನಾ ನಾಯಕಿ’ ಸಮಾವೇಶದಲ್ಲಿ ಮಹತ್ವದ ಘೋಷಣೆಯಾಗುವ ಸಾಧ್ಯತೆ ಇದೆ. ಹಾಗೂ ಕಾಂಗ್ರೆಸ್ ಈ ಸಮಾವೇಶದಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲಿದೆ.

Leave a Reply

Your email address will not be published. Required fields are marked *

error: Content is protected !!