ಖಾನಾಪುರ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 15 ಸಾವಿರ ರೂಗೆ ಹೆಚ್ಚಳ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಬೆಳಗಾವಿಯ ಖಾನಾಪುರ ತಾಲ್ಲೂಕು ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಪರ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಿಯಾಂಕಾ ಗಾಂಧಿ, ‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು 15 ಸಾವಿರ ರೂಗೆ ಹಾಗೂ ಮಿನಿ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರ ಗೌರವಧನವನ್ನು 10 ಸಾವಿರ ರೂಗೆ ಹೆಚ್ಚಿಸಲಾಗುವುದು ಎಂದರು.
ಅಥವಾ ನಿಧನರಾದರೆ, 3 ಲಕ್ಷ ರೂ ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 2 ಲಕ್ಷ ರೂ ನೀಡಲಾಗುವುದು. ಕೋವಿಡ್ ಸಂಕಷ್ಟ ಸಮಯದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 8 ಸಾವಿರ ರೂ, ಬಿಸಿಯೂಟ ನೌಕರರಿಗೆ 5 ಸಾವಿರ ರೂ ಗೌರವಧನ ನೀಡಲಾಗುವುದು’ ಎಂದು ತಿಳಿಸಿದರು.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಎಐಸಿಸಿ ಕಾರ್ಯದರ್ಶಿ ವಿಷ್ಣು ನಾಗ್, ಶಾಸಕಿ ಡಾ.ಅಂಜಲಿ ನಿಂಬಾಳ್ಕರ್, ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಮುಖಂಡರಾದ ಸಂಗಮೇಶ ವಾಲಿ, ಪಿಂಟೂ ಬೆಣ್ಣಿ, ಮಂಗೇಶ ಗುರವ ಇತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
