ಜೂ.27 ರಿಂದ ಜು.04 ರವರೆಗೆ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಗ್ನೆ.
ದಾವಣಗೆರೆ : ಜೂ.27 ರಿಂದ ಜು.04 ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಸುಗಮವಾಗಿ ನಡೆಯಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರ ನಡೆಯದಂತೆ ತಡೆಗಟ್ಟುವ ಸಲುವಾಗಿ ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರ ಸುತ್ತಮುತ್ತ 200 ಮೀ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿರುತ್ತಾರೆ.
ಜಿಲ್ಲೆಯಲ್ಲಿ ಒಟ್ಟು 08 ಪರೀಕ್ಷಾ ಕೇಂದ್ರಗಳಲ್ಲಿ ಚನ್ನಗಿರಿ-01, ದಾವಣಗೆರೆ(ಉ)-01, ದಾವಣಗೆರೆ(ದ)-03, ಹರಿಹರ-01, ಹೊನ್ನಾಳಿ-01, ಜಗಳೂರು-01, ಪರೀಕ್ಷಾ ಕೇಂದ್ರಗಳು ನಡೆಯಲಿರುವುದರಿಂದ ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ ಪರಿಧಿ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಹಾಗೂ ಜೆರಾಕ್ಸ್, ಸೈಬರ್ ಕೆಫೆ, ಕಂಪ್ಯೂಟರ್ ಕೇಂದ್ರಗಳನ್ನು ತೆರೆಯುವುದನ್ನು ನಿಷೇಧಿಸಲು ದಾವಣಗೆರೆ ಸರ‍್ವಜನಿಕ ಶಿಕ್ಷಣ ಇಲಾಖೆಯ ಉಪನರ‍್ದೇಶಕರು ತಿಳಿಸಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.