ಬುದ್ದ ಪೂರ್ಣಿಮೆ ಪ್ರಯುಕ್ತ ಮಾಂಸ ಮಾರಾಟ ನಿಷೇಧ

ದಾವಣಗೆರೆ : ಮೇ.16ರಂದು ಬುದ್ಧ ಪೂರ್ಣಿಮಾ ಪ್ರಯುಕ್ತ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಾಂಸದ ಉದ್ದಿಮೆ ನೆಡೆಸುತ್ತಿರುವ ಉದ್ದಿಮೆದಾರರು ಪ್ರಾಣಿ ವಧೆ, ಪ್ರಾಣಿ ಮಾಂಸ, ಹಾಗೂ ಮೀನಿನ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಈ ದಿನಾಂಕದ0ದು ಮಾಂಸ ಮಾರಾಟ ಮಾಡಬಾರದು, ತಪ್ಪಿದಲ್ಲಿ ಮಹಾನಗರ ಪಾಲಿಕೆ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಮಹಾನಗರ ಪಾಲಿಕೆಯ ಸಹಾಯಕ ನಿರ್ದೇಶಕರು (ಪವೈಸೇ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.