ಬಾಲನಟ, ನಟಿಯರ ನಟನಾ ಪಾತ್ರಕ್ಕಾಗಿ ಮಕ್ಕಳ ಬಳಕೆ ನಿಷೇಧ

students

ದಾವಣಗೆರೆ: ಬಾಲ ನಟರು ಹಾಗೂ ಬಾಲ ನಟಿಯರ ಪಾತ್ರಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳಲು ಇಚ್ಛಿಸುವ ಸಿನಿಮಾ ಅಥವಾ ಧಾರವಾಹಿ ನಿರ್ದೇಶಕರು, ನಿರ್ಮಾಪಕರು, ಇಲ್ಲವೆ ಆಯೋಜಕರು ಕಡ್ಡಾಯವಾಗಿ ಜಿಲ್ಲಾಧಿಕಾರಿಗಳ ಅನುಮತಿ ಪತ್ರ ಪಡೆಯುವುದು ಕಡ್ಡಾಯವಾಗಿದೆ.

ಮಕ್ಕಳ ಶಿಕ್ಷಣದ ಹಕ್ಕಿಗೆ ಮಾರಕವಾಗದಂತೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಹಾಗೂ ಬಾಲ ಕಿಶೋರ ಕಾರ್ಮಿಕ ನಿμÉೀಧ ಮತ್ತು ನಿಯಂತ್ರಣ ಕಾಯ್ದೆ 1896ರ ಕರ್ನಾಟಕ ನಿಯಮಗಳು 2ಸಿ ರಲ್ಲಿ ಒಬ್ಬ ಕಲಾವಿದನಾಗಿ ಬಾಲ ನಟ, ನಟಿಯಾಗಿ ಕೆಲಸವನ್ನು ಒಂದು ದಿನದಲ್ಲಿ 5 ಗಂಟೆಗಳಿಗಿಂತ ಮತ್ತು ವಿಶ್ರಾಂತಿ ಇಲ್ಲದೆ 3 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡಿಸುವಂತಿಲ್ಲ.
ಮಕ್ಕಳನ್ನು ಬಳಸಿ ಸಂಪೂರ್ಣ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಮಕ್ಕಳ ದುರುಪಯೋಗ  ಪ್ರಕರಣ, ನಿರ್ಲಕ್ಷ್ಯ, ಶೋಷಣೆ ನಡೆಯದಂತೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮಕ್ಕಳು ನಿರಂತರವಾಗಿ 27 ದಿನಗಳಿಗಿಂತ ಹೆಚ್ಚಿನ ದಿನಗಳು ನಟನಾ ಕೆಲಸದಲ್ಲಿ ತೊಡಗಲು ಅವಕಾಶ ನೀಡಬಾರದು. ಪ್ರತಿ 5 ಮಕ್ಕಳಿಗೆ ಒಬ್ಬರಂತೆ ಜವಾಬ್ದಾರಿ ವ್ಯಕ್ತಿಯನ್ನು ನೇಮಿಸುವುದು.


ಮಕ್ಕಳ ನಟನಾ ಕೆಲಸದ ಚಟುವಟಿಕೆ ನಟನೆಗೆ ಭಾಗವಹಿಸುವ ಮಕ್ಕಳ ಪೆÇೀಷಕರ, ಪಾಲಕರ ಒಪ್ಪಿಗೆ ಪತ್ರವನ್ನು ಪಡೆದು ಸಿನಿಮಾ ಅಥವಾ ಧಾರವಾಹಿ ನಿರ್ದೇಶಕರು, ನಿರ್ಮಾಪಕರು, ಇಲ್ಲವೆ ಆಯೋಜಕರು ಕಡ್ಡಾಯವಾಗಿ ಪ್ರದೇಶ ಕಾರ್ಯವ್ಯಾಪ್ತಿಯ ಜಿಲ್ಲಾ ದಂಡಾಧಿಕಾರಿಗಳ ಪೂರ್ವಾನುಮತಿಯೊಂದಿಗೆ ಮುಚ್ಚಳಿಕೆ ಪತ್ರವನ್ನು ಮತ್ತು ನಮೂನೆ.ಸಿ ಯಲ್ಲಿ ಜಿಲ್ಲಾ ದಂಡಾಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಅಧ್ಯಕ್ಷರಾದ ಡಾ; ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!