ಜಿಲ್ಲಾ ಭೋವಿ ಸಮಾಜದಿಂದ ಏಪ್ರಿಲ್ 1 ರಂದು ಪ್ರತಿಭಟನೆ
ದಾವಣಗೆರೆ: ಬೇಡ ಜಂಗಮ ಎಂದು ನಕಲಿ ಜಾತಿ ಪ್ರಮಾಣ ಪತ್ರ ಪಡೆದಿರುವ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹಾಗೂ ಜಿಪಂ ಮಾಜಿ ಸದಸ್ಯ ಬಿ.ಎಂ. ವಾಗೀಶ್‌ಸ್ವಾಮಿ ಅವರ ನಡೆ ವಿರೋಧಿಸಿ ಜಿಲ್ಲಾ ಭೋವಿ ಸಮಾಜದಿಂದ ಏ.೧ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.
ಅಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಅಂಬೇಡ್ಕರ್ ವೃತ್ತದಿಂದ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿ ನಂತರ ಎಸಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವುದಾಗಿ ಸೋಮವಾರ ಸಮಾಜದ ಅಧ್ಯಕ್ಷ ಪಿ.ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಸಮಾಜದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.
ಸಭೆಯಲ್ಲಿ ಸಮಾಜದ ಪದಾಧಿಕಾರಿಗಳಾದ ಹನುಮಂತಪ್ಪ, ಎಸ್. ಅರುಣ್‌ಕುಮಾರ್, ಸುರೇಶ್ ಬುಲ್ಡಾಪುರ, ಎಸ್. ಗೋವಿಂದ್‌ರಾಜ್, ಆಟೋ ಕಾಲೋನಿ ತಿಮ್ಮಣ್ಣ, ರಾಜಶೇಖರ್, ಪುರಸಭೆ ಸದಸ್ಯರಾದ ಶಿವಣ್ಣ, ಭೋವಿ ವಿದ್ಯಾರ್ಥಿನಿಲಯ ಅಧ್ಯಕ್ಷ ಹೆಚ್. ಮಂಜುನಾಥ್ ಮತ್ತಿತರರು ಪಾಲ್ಗೊಂಡಿದ್ದರು.