ದಾವಣಗೆರೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ಸೆ 18 ರಂದು ಪ್ರತಿಭಟನೆ ದಾವಣಗೆರೆ: ಮಂಡ್ಯ ಜಿಲ್ಲೆ
ದಾವಣಗೆರೆ: ಮಂಡ್ಯ ಜಿಲ್ಲೆ ಸೇರಿದಂತೆ ಇನ್ನಿತರೆ ಪ್ರದೇಶದಲ್ಲಿ ಗಣೇಶ ವಿಸರ್ಜನೆ ವೇಳೆಯಲ್ಲಿ ನಡೆದ ಗಲಭೆಯನ್ನು ಖಂಡಿಸಿ ಸೆ 18 ರಂದು ದಾವಣಗೆರೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ
ಮಂಡ್ಯ ಜಿಲ್ಲೆಯ ನಾಗಮಂಗಕದ ಬದರಿ ಕೊಪ್ಪಲಿನಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆಯನ್ನು ಖಂಡಿಸಿ ಹಾಗೂ ದಾವಣಗೆರೆಯ ಮತೀಯ ಶಕ್ತಿಗಖ ಬಂಧನಕ್ಕೆ ಒತ್ತಾಯಿಸಿ ಪ್ರಕರಣದ ಸೂಕ್ತ ತನಿಖೆಯನ್ನು ನಡೆಸುವಂತೆ ಆಗ್ರಹಿಸಿ ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನದ ಆವರಣದಿಂದ ಎಸಿ ಕಚೇರಿ ವೃತ್ತದ ಬಳಿಯ ಮಹಾನಗರಪಾಲಿಕೆ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗಳ ಒಕ್ಕೂಟ ಪ್ರಕಟಣೆಯಲ್ಲಿ ತಿಳಿಸಿದೆ.