protest; ಕಟ್ಟಡ ನಿರ್ಮಾಣ ಕಾರ್ಮಿಕರ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

ದಾವಣಗೆರೆ, ಆ.23: ಕಟ್ಟಡ ನಿರ್ಮಾಣ ಕಾರ್ಮಿಕರ ಸಮಸ್ಯೆ ಮತ್ತು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸಿ.ಐ.ಟಿ.ಯು.(CITU) ಸಂಘಟನೆಯ ನೇತೃತ್ವದಲ್ಲಿ ರಾಜ್ಯದ್ಯಂತ ಪ್ರತಿಭಟನೆ (protest) ಹಮ್ಮಿಕೊಳ್ಳಲಾಗಿದ್ದು, ಅದರ ಭಾಗವಾಗಿ ಆಗಸ್ಟ್ 24ರಂದು ಬೆಳಗ್ಗೆ 11ಕ್ಕೆ ದಾವಣಗೆರೆಯಲ್ಲಿ ಕಾರ್ಮಿಕ ಕಛೇರಿಯ ಮುಂದೆ ಪ್ರತಿಭಟನೆ ಮಾಡಿ ಸಹಾಯಕ ಕಾರ್ಮಿಕ ಆಯುಕ್ತರ ಮೂಲಕ ಕಾರ್ಮಿಕ ಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು.
ಕಟ್ಟಡ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗಾಗಿ ಸಿ.ಐ.ಟಿ.ಯು. ನೇತೃತ್ವದಲ್ಲಿ ಆಗಸ್ಟ್ 24ರಂದು ಕಟ್ಟಡ ಕಾರ್ಮಿಕರಿಂದ ರಾಜ್ಯದಾದ್ಯಂತ ಜಿಲ್ಲಾ ಕಾರ್ಮಿಕರ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ನಡೆಸಿ ಕಾರ್ಮಿಕ ಮಂತ್ರಿಗಳಿಗೆ ಕಾರ್ಮಿಕ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಗುವುದು ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ನ ದಾವಣಗೆರೆ ಜಿಲ್ಲಾ ಅಧ್ಯಕ್ಷರಾದ ಆನಂದ ರಾಜು ಕೆ. ಹೆಚ್ ತಿಳಿಸಿದರು.
police; ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ; ಪೊಲೀಸ್ ವರಿಷ್ಟಾಧಿಕಾರಿ ಡಾ. ಅರುಣ್ ಕೆ. ವರ್ಗಾವಣೆ
ಬೇಡಿಕೆಗಳು:
1. ಬಾಕಿ ಇರುವ ಶೈಕ್ಷಣಿಕ ಅರ್ಜಿಗಳಿಗೆ ತಕ್ಷಣ ಹಣ ವರ್ಗಾವಣೆ ಆಗಬೇಕು.
2. ಫಲಾನುಭವಿಯ ಕಾರ್ಡ್ ನವೀಕರಣಕ್ಕೆ ವೇತನ ಚೀಟಿ ಮತ್ತು ಹಾಜರಾತಿ ಪಟ್ಟಿ ಕಡ್ಡಾಯಗೊಳಿಸಿರುವ ಆದೇಶವನ್ನು ವಾಪಸ್ ಪಡೆಯಬೇಕು.
3. ಬೋಗಸ್ ಕಾರ್ಡ್ ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು.
4. ಆರೋಗ್ಯ ಸಂಜೀವಿನಿ ಜಾರಿಗೊಳಿಸಿ ಹಣರಹಿತ ಚಿಕಿತ್ಸೆ ಸೌಲಭ್ಯ ಒದಗಿಸಬೇಕು.
5. ನೊಂದಾಣೆಗೆ ಹೊಸ ತಂತ್ರಾಂಶ ಆರಂಭಿಸಿ ಸರ್ವರ್ ಸಮಸ್ಯೆ ಹಾಗು ಇತರೆ ಇಲಾಖೆಯ ಮೇಲಿನ ಅವಲಂಬನೆ ತಪ್ಪಿಸಬೇಕು.
6. ಪಿಂಚಣಿಗೆ ಅರ್ಜಿ ಸಲ್ಲಿಸುವಲ್ಲಿ ಇರುವ ಸಮಸ್ಯೆಗಳನ್ನ ಬಗೆಹರಿಸಬೇಕು.
7. ಅರ್ಜಿಗಳ ವಿಲೇವಾರಿ ವಿಳಂಬ ತಪ್ಪಿಸಲು ಪ್ರತಿ ಅರ್ಜಿಗೂ ಸಂಖ್ಯೆಯನ್ನು ನೀಡಿ ಸೀನಿಯಾರಿಟಿ ಆಧಾರದಲ್ಲಿ ವಿಲೇವಾರಿ ಮಾಡಬೇಕು.
Stray Dog; ಬಸಾಪುರದಲ್ಲಿ 201 ಬೀದಿ ನಾಯಿಗಳ ಹಾವಳಿ, ಅನಾಹುತಕ್ಕೂ ಮುನ್ನ ಎಚ್ಚೆತ್ತುಕೊಳ್ಳುವುದೇ ಪಾಲಿಕೆ?
8. ಕಲ್ಯಾಣ ಮಂಡಳಿಯಿಂದ ಆರಂಭಿಸಲಾದ ಶಿಶುವಿಹಾರ ಹಾಗೂ ಮೊಬೈಲ್ ಕ್ಲಿನಿಕ್ ಗಳು, ಬಸ್ ಪಾಸ್ ಬೇಡ.
9. ಮನೆ ನಿರ್ಮಾಣಕ್ಕೆ 5 ಲಕ್ಷ ರೂಪಾಯಿ ಸಹಾಯಧನ ನೀಡಬೇಕು.
10. ನಿರ್ಮಾಣ ಕಾರ್ಮಿಕರಿಗೆ ಭವಿಷ್ಯನಿಧಿ ಯೋಜನೆ ಜಾರಿ ಮಾಡಿ.
11. ಸ್ಲಂ ಬೋರ್ಡ್ ಗೆ ನೀಡಿದ ಹಣವನ್ನು ಮಂಡಳಿಗೆ ಮರು ಪಾವತಿ ಮಾಡಬೇಕು.
12. ಕಲ್ಯಾಣ ಮಂಡಳಿಯಲ್ಲಿ ನೈಜ ಕಾರ್ಮಿಕ ಸಂಘಟನೆಗಳಿಗೆ ಪ್ರಾತಿನಿಧ್ಯ ಸಿಗಬೇಕು.
13. ಕಲ್ಯಾಣ ಮಂಡಳಿಯಲ್ಲಿ ಮತ್ತು ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಬೇಕು.
15. ಎಲ್ಲ ಖರೀದಿಗಳನ್ನು ನಿಲ್ಲಿಸಬೇಕು ಕಾರ್ಮಿಕರಿಗೆ ನೇರ ಹಣ ವರ್ಗಾವಣೆ ಮಾಡಬೇಕು.