ಮೇ ಆರಂಭದಲ್ಲಿಯೇ ಪಿಯು ಫಲಿತಾಂಶ

ಮೇ ಆರಂಭದಲ್ಲಿಯೇ ಪಿಯು ಫಲಿತಾಂಶ

ತುಮಕೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಮೇ ಮೊದಲ ವಾರದಲ್ಲಿಯೇ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ತಿಪಟೂರಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.

ರಾಜ್ಯದ 1,109 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಸುಮಾರು 7 ಲಕ್ಷ ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ.  ವಿದ್ಯಾರ್ಥಿ ಸ್ನೇಹಿಯಾಗಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ ಎಲ್ಲ ರೀತಿಯ ಸಿದ್ಧತೆಗಳನ್ನು ತೆಗೆದುಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ. ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!